ರಾಜ್ಯಸಭೆ ಚುನಾವಣೆ; ಮತಕ್ಕಾಗಿ ಶಾಸಕರಿಂದ ಹಣಕ್ಕೆ ಡಿಮಾಂಡ್ ದುರದೃಷ್ಟಕರ: ಶೆಟ್ಟರ್

ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಶಾಸಕರು 5ರಿಂದ 10 ಕೋಟಿ ರುಪಾಯಿ ಡಿಮಾಂಡ್ ಮಾಡುತ್ತಿರುವುದು ದುರದೃಷ್ಟಕರ ಎಂದು ಪ್ರತಿಪಕ್ಷ ನಾಯಕ...
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
ಹಾವೇರಿ: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಶಾಸಕರು 5ರಿಂದ 10 ಕೋಟಿ ರುಪಾಯಿ ಡಿಮಾಂಡ್ ಮಾಡುತ್ತಿರುವುದು ದುರದೃಷ್ಟಕರ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಶಾಸಕರು ಹಣಕ್ಕೆ ಡಿಮಾಂಡ್ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಶಾಸಕರು ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡು ಎಂದಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಹಣವೇ ಪ್ರಮುಖ ವಿಷಯವಾಗುತ್ತಿರುವುದು ಕೇದಕರ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇದೇ ವೇಳೆ ಪೊಲೀಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್, ಪೊಲೀಸರು ಇಲ್ಲದೆ ಮುಖ್ಯಮಂತ್ರಿ ಮತ್ತು ಸಚಿವರು ಓಡಾಡಿದ ಪಕ್ಷದಲ್ಲಿ ಜನರು ಇವರನ್ನು ಹಿಡಿದು ಹೊಡೆಯುತ್ತಾರೆ. ಹೀಗಾಗಿ ಈ ಕೂಡಲೆ ಸಿಎಂ ಮತ್ತು ಗೃಹ ಸಚಿವರು ಪೊಲೀಸರನ್ನು ಕರೆದು ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು,
ಮುಖ್ಯಮಂತ್ರಿ, ಸಚಿವರು ಸೇರಿದಂತೆ ಜನರನ್ನು ರಕ್ಷಣೆ ಮಾಡುತ್ತಿರುವ ಪೊಲೀಸರು ಬೀದಿಗಿಳಿದು ಹೋರಾಟ ಮಾಡುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com