ದೇವೇಗೌಡ, ಎಚ್ ಡಿಕೆ ವಿರುದ್ಧ ಹೇಳಿಕೆ: ಜೆಡಿಎಸ್ ಕಾರ್ಯಕರ್ತರಿಂದ ಜಮೀರ್ ಅಹ್ಮದ್ ಮನೆಗೆ ಮುತ್ತಿಗೆ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ .ಡಿ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
Updated on
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ .ಡಿ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ಶಾಸಕ ಜಮೀರ್ ಅಹ್ಮದ್ ಖಾನ್ ಫ್ಲ್ಯಾಟ್ ಗೆ ಮುತ್ತಿಗೆ ಹಾಕಿದರು.
ಇಂದು ಬೆಳಗ್ಗೆ ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಜಮೀರ್ ಅಹ್ಮದ್ ಖಾನ್ ಅವರ ಫ್ಲ್ಯಾಟ್ ಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರು ಜಮೀರ್ ಅವರ ಜೊತೆ ಮಾತನಾಡಬೇಕೆಂದು ಪಟ್ಟು ಹಿಡಿದರು. ಆದರೆ ಜಮೀರ್ ಅಹ್ಮದ್ ಅವರು ಮನೆಯಲ್ಲಿದ್ದರೂ ಒಳಗೆ ಬಿಟ್ಟುಕೊಳ್ಳಲಿಲ್ಲ. ಹೀಗಾಗಿ ಕೆಲಕಾಲ ಶಾಸಕರ ಗನ್ ಮ್ಯಾನ್ ಹಾಗೂ ಕಾರ್ಯಕರ್ತರ ಮಧ್ಯ ತೀವ್ರ ವಾಗ್ವಾದ ನಡೆಯಿತು.
ಜಮೀರ್ ಅಹ್ಮದ್ ಅವರು ದೇವೇಗೌಡರನ್ನು ಹಾಗೂ ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆ ಚುನಾವಣೆಗೆ ಬಿ.ಎಂ.ಫಾರೂಕ್ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ನಿಮಗೆ ನಿಜಕ್ಕೂ ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಹಾಸನವನ್ನೋ ಅಥವಾ ರಾಮನಗರ ಲೋಕಸಭಾಕ್ಷೇತ್ರವನ್ನು ಮುಸ್ಲಿಂ ಅಭ್ಯರ್ಥಿಗಳಿಗೆ ಬಿಟ್ಟುಕೊಡಿ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com