ಕಾರ್ಯಕರ್ತರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಸುರಿಸಿದ ಮಾಜಿ ಪ್ರಧಾನಿ

ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮಾತನಾಡುವ ವೇಳೆ ಭಾವುಕರಾದರು...
ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ

ಬೆಂಗಳೂರು: ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮಾತನಾಡುವ ವೇಳೆ ಭಾವುಕರಾದರು.

ರಾಜ್ಯಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಜೆಡಿಎಸ್ ಮಾತ್ರ ಮುಸ್ಲಿಂ ಅಭ್ಯರ್ಥಿ ಬಿ.ಎಂ ಫಾರೂಕ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಕೆಲವ ಚಿತಾವಣೆಯಿಂದ ನಡೆದ ಅಡ್ಡಮತದಾನದಿಂದಾಗಿ 25 ಲಕ್ಷ ಮುಸ್ಲಿಮರಿಗೆ ವಂಚನೆಯಾಗಿದೆ ಎಂದು ದೇವೇಗೌಡ ಆರೋಪಿಸಿದ್ದಾರೆ.

ಇನ್ನು ಮುಸ್ಲಿಮರ ಪರವಾಗಿರುವ ತಮ್ಮ ಪಕ್ಷ ಮುಸ್ಲಿಂ ವಿರೋಧಿಯಾಗಿರುವ ಕಾಂಗ್ರೆಸ್ ವಿರುದ್ಧ ಜೂನ್ 21 ರಿಂದ ಮಂಗಳೂರಿನಿಂದ ಇಡೀ ಕರ್ನಾಟಕದಾದ್ಯಂತ ಮುಸ್ಲಿಮರ ಪರ ಅಭಿಯಾನ ಅರಂಭಿಸಲಾಗುವುದು ಎಂದು ಹೇಳಿದ್ದಾರೆ.

ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಮಾತನಾಡಿದ ದೇವೇಗೌಡ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಜೆಡಿಎಸ್ ನ ಎಲ್ಲಾ ಭಿನ್ನಮತೀಯ ಶಾಸಕರನ್ನು ಸೋಲಿಸುವುದಾಗಿ ಸವಾಲು ಹಾಕಿದರು. ಅಡ್ಡ ಮತದಾನ ಮಾಡಿಸಲು ಪ್ರಮುಖ ಪಾತ್ರ ವಹಿಸಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಸರಿಯಾಗ ಪಾಠ ಕಲಿಸುವುದಾಗಿ ಅವರು ಸವಾಲು ಹಾಕಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ದೇವೇಗೌಡ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಪಡೆಯುವುದಾಗಿ ಹೇಳುತ್ತಿದ್ದಾರೆ, ತಮ್ಮ ಸ್ವಸಾಮರ್ಥ್ಯದಿಂದ ಕೇವಲ ಒಂದು ಅಭ್ಯರ್ಥಿಯನ್ನು ಗೆಲ್ಲಿಸಲಾಗದವರು 150 ಸೀಟು ಗಳಿಸುತ್ತೇವೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ  ರಾಜ್ಯ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಾರೆ, ಮತ್ತೊಂದೆಡೆ ಯಡಿಯೂರಪ್ಪ ಕಾಂಗ್ರೆಸ್ ಸಖ್ಯ ಬೆಳೆಸುತ್ತಿದ್ದಾರೆ ಎಂದು ದೇವೇಗೌಡ ಟೀಕಿಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com