ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಶಾಸಕರ ತಿಥಿ ಕಾರ್ಡ್‌ ಹಾಕಿ ಆಕ್ರೋಶ !

ಭಿನ್ನಮತೀಯ ಚಟುವಟಿಕೆಗಳಿಂದ ಪಕ್ಷದಿಂದ ಅಮಾನತು ಗೊಂಡಿರುವ ಜೆಡಿಎಸ್ ನ 8 ಶಾಸಕರ ಪೈಕಿ ಇಬ್ಬರು ಶಾಸಕರ ತಿಥಿ ಕಾರ್ಡ್ ಸಾಮಾಜಿಕ ಜಾಲತಾಣ ಫೇಸ್..
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಜೆಡಿಎಸ್ ಶಾಸಕರ ತಿಥಿ ಕಾರ್ಡ್
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಜೆಡಿಎಸ್ ಶಾಸಕರ ತಿಥಿ ಕಾರ್ಡ್
Updated on

ಬೆಂಗಳೂರು: ಭಿನ್ನಮತೀಯ ಚಟುವಟಿಕೆಗಳಿಂದ ಪಕ್ಷದಿಂದ ಅಮಾನತು ಗೊಂಡಿರುವ ಜೆಡಿಎಸ್ ನ  8 ಶಾಸಕರ ಪೈಕಿ ಇಬ್ಬರು ಶಾಸಕರ ತಿಥಿ ಕಾರ್ಡ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹರಿದಾಡುತ್ತಿದೆ.

ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಹಣಕ್ಕಾಗಿ ತಮ್ಮ ಮತವನ್ನು ಮಾರಿಕೊಂಡಿದ್ದಲ್ಲದೆ ಪಕ್ಷಕ್ಕೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿ ಅವರು ಬದುಕಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ತಿಥಿ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮೈಸೂರಿನ ಜೆಡಿಎಸ್ ಕಾರ್ಯಕರ್ತ ಸತೀಶ್‍ಗೌಡ ಎಂಬಾತ ಈ ಇಬ್ಬರು ಶಾಸಕರ ಭಾವಚಿತ್ರವಿರುವ ತಿಥಿ ಕಾರ್ಡ್‍ನ್ನು ಮುದ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com