8 ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಮನವಿ

ಪಕ್ಷದ ನಾಯಕತ್ವದ ವಿರುದ್ಧವೇ ತಿರುಗಿಬಿದ್ದು ಅಮಾನತುಗೊಂಡಿರುವ ತನ್ನ 8 ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಸೋಮವಾರ...
ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ- ಸಿ.ಎನ್.ಬಾಲಕೃಷ್ಣ
ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ- ಸಿ.ಎನ್.ಬಾಲಕೃಷ್ಣ
Updated on: 
ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧವೇ ತಿರುಗಿಬಿದ್ದು ಅಮಾನತುಗೊಂಡಿರುವ ತನ್ನ 8 ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಸೋಮವಾರ ವಿಧಾನಸಭೆ ಉಪಾಧ್ಯಕ್ಷರಿಗೆ ಮನವಿ ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಮಾನತುಗೊಂಡಿರುವ ಚೆಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಕೆ.ಗೋಪಾಲಯ್ಯ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ಅನ್ಸಾರಿ, ರಮೇಶ್ ಬಂಡಿಸಿದ್ದೇಗೌಡ, ಎಚ್.ಸಿ.ಬಾಲಕೃಷ್ಣ ಹಾಗೂ ಭೀಮಾನಾಯಕ್ ಅವರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಶಾಸಕರಾದ ಬಿ.ಬಿ.ನಿಂಗಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರು ಉಪ ಸಭಾಪತಿ ಎನ್.ಎಚ್.ಶಿವಶಂಕರರೆಡ್ಡಿ ಅವರಿಗೆ ದೂರು ನೀಡಿದ್ದಾರೆ.
ವಿಧಾನಪರಿಷತ್ತು ಹಾಗೂ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ 8 ಮಂದಿ ಶಾಸಕರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಜೆಡಿಎಸ್ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com