ಬೆಂಗಳೂರು: ಅತೃಪ್ತ ಶಾಸಕರ ಬಂಡಾಯ ಶಮನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಸರತ್ತು ನಡೆಸುತ್ತಿದ್ದು, ಶನಿವಾರ ಸಿಎಂ ಸೂಚನೆ ಮೇರೆಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು 'ರೆಬೆಲ್' ಸ್ಟಾರ್ ಅಂಬರೀಷ್ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಯತ್ನ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಬಂಡಾಯವೆದ್ದಿದ್ದ ಅಂಬರೀಷ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು.
ಅಂಬರೀಷ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಅಂಬರೀಷ್ ಅವರು ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲೇ ಮಂಡ್ಯ ಉಸ್ತುವಾರಿ ನೋಡಿಕೊಳ್ಳುವೆ. ಅವರು ಕೇಂದ್ರ, ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದವರು ಎಂದರು.
ಇನ್ನು ಅಂಬರೀಷ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡೋದು ಸಿಎಂಗೆ ಬಿಟ್ಟ ವಿಚಾರ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.