ಬಿಜೆಪಿ ಅತೃಪ್ತರೊಂದಿಗೆ ಸಭೆ: ಈಶ್ವರಪ್ಪ ವಿರುದ್ಧ ಬಿಎಸ್ ವೈ ಗರಂ

ಅತೃಪ್ತ ನಾಯಕರ ನೇತೃತ್ವ ವಹಿಸಿದ ವಿಧಾನ ಪರಿಷತ್ತಿನ ಪ್ರತಿಪಕ್ಷದ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಬೆಂಗಳೂರು: ಅತೃಪ್ತ ನಾಯಕರ ನೇತೃತ್ವ ವಹಿಸಿದ ವಿಧಾನ ಪರಿಷತ್ತಿನ ಪ್ರತಿಪಕ್ಷದ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಿನ್ನೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆದ ಅತೃಪ್ತ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಈಶ್ವರಪ್ಪ ಅವರು ದೊಡ್ಡ ನಾಯಕರು. ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದರು. 
ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ನಿನ್ನೆ ಬೆಂಗಳೂರಿನಲ್ಲಿದ್ದಿದ್ದರೆ ನಾನೇ ಆ ಸಭೆಗೆ ಹೋಗುತ್ತಿದ್ದೆ. ಆದರೆ ಬೆಂಗಳೂರಿನಲ್ಲಿಲ್ಲದ ಕಾರಣ ಹೋಗಲು ಸಾಧ್ಯವಾಗಲಿಲ್ಲ. ಪದಾಧಿಕಾರಿಗಳ ನೇಮಕ ವೇಳೆ ಅಸಮಾಧಾನ ಸಹಜ. ಎಲ್ಲವನ್ನೂ ಮಾತನಾಡಿ ಸರಿಪಡಿಸುತ್ತೇನೆ. ಸಭೆ ನಡೆಸಬೇಡಿ ಎಂದು ಈಶ್ವರಪ್ಪಗೆ ಹೇಳಿದ್ದೆ. ಆದರೂ ಸಭೆ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಒಂದೊಂದು ಹುದ್ದೆಗೂ 15ರಿಂದ 20 ಅರ್ಜಿಗಳು ಬಂದಿದ್ದವು. ಆದರೆ ಎಲ್ಲರನ್ನೂ ಪದಾಧಿಕಾರಿಗಳನ್ನಾಗಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸಣ್ಣಪುಟ್ಟ ಅಸಮಾಧಾನ ಸಹಜ. ಆ ಎಲ್ಲಾ ಗೊಂದಲಗಳನ್ನು ಸರಿಪಡಿಸಲಾಗುವುದು ಎಂದರು.
ಅತೃಪ್ತರೊಂದಿಗೆ ಸಭೆ ಈಶ್ವರಪ್ಪ ವಿರುದ್ಧ ಯಾವುದೆ ಕ್ರಮ ತೆಗೆದುಕೊಳ್ಳಲ್ಲ ಮತ್ತು ಈ ಬಗ್ಗೆ ವರಿಷ್ಠರಿಗೂ ವರದಿ ನೀಡಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದರು. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಅರವಿಂದ್ ಲಿಂಬಾವಳಿ, ಸೊಗಡು ಶಿವಣ್ಣ, ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲಾ ಘಟಕದ ಹಾಲಿ ಪದಾಧಿಕಾರಿಗಳು ಮತ್ತು ಅಸಮಧಾನಗೊಂಡ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com