ನಾಯಕರ ಭಿನ್ನ ಶಮನಕ್ಕೆ ವರಿಷ್ಠರ ಸಮ್ಮುಖದಲ್ಲೇ ಸಭೆ: ಬಿ.ಎಸ್. ಯಡಿಯೂರಪ್ಪ

ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಸೃಷ್ಟಿಯಾಗಿರುವ ಭಿನ್ನಮತವನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್
Updated on

ಬೆಂಗಳೂರು: ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಸೃಷ್ಟಿಯಾಗಿರುವ ಭಿನ್ನಮತವನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿ ಪದಾಧಿಕಾರಿಗಳ ನೇಮಕದಲ್ಲಿ ಪಕ್ಷದಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಈ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಕಂಡು ಬರುತ್ತಿಲ್ಲ. ಹೀಗಾಗಿ ಜುಲೈ 2 ರಂದು ಪಕ್ಷದ ವರಿಷ್ಠರ ಸಮ್ಮುಖದಲ್ಲೇ ಸಭೆ ನಡೆಸಿ, ಶಮನಗೊಳ್ಳುವಂತೆ ಮಾಡುತ್ತೇನೆಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಅತೃಪ್ತ ಮಾಜಿ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಕೆ.ಎಸ್. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ನಿಲುವಿನ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ಹಿರಿಯ ಮುಖಂಡರು ಪ್ರತಿಯೊಂದು ಜಿಲ್ಲೆಗೆ ತೆರಳಿ ಅಲ್ಲಿನ ಮುಖಂಡರ ಸಲಹೆಗಳನ್ನು ಆಲಿಸಿದ ನಂತರ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದಲ್ಲಿ ಅಪಸ್ವರಕ್ಕೆ ದಾರಿಯಾಗುತ್ತಿರಲಿಲ್ಲ. ಬೆಂಗಳೂರಿನಲ್ಲಿ ಕುಳಿತ 20 ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದರು.

ಈಶ್ವರಪ್ಪ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಈಶ್ವರಪ್ಪ ಅವರು ಹಿರಿಯ ನಾಯಕರು. ಪ್ರತಿ ಸ್ಥಾನಕ್ಕೂ 20-25 ಸ್ಪರ್ಧಿಗಳಿದ್ದು, ಪ್ರತೀ ಸ್ಥಾನದ ನೇಮಕವನ್ನು ಹೇಗೆ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಅವರ ಸಲಹೆ ಕೇಳುತ್ತೇನೆ. ಪ್ರತೀ ಸ್ಥಾನದ ಕುರಿತು ಪ್ರತೀಯೊಬ್ಬರ ಬಳಿ ಹೋಗಿ ಸಲಹೆ ಕೇಳುವುದು ಸಾಧ್ಯವಾಗುವುದಿಲ್ಲ. ಪಕ್ಷಕ್ಕಾಗಿ ಕೆಲಸ ಮಾಡುವವರು ಅಸಮಾಧಾನಗೊಳ್ಳುವ ಅವಶ್ಯಕತೆಯಿಲ್ಲ. ಪ್ರತೀಯೊಬ್ಬ ಕೆಲಸವನ್ನು ನಾವು ಬಳಕೆ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com