ಬೆಂಗಳೂರಲ್ಲಿ ನಡೆಯಲಿದೆ ಎಐಸಿಸಿ ಮಹಾಧಿವೇಶನ?

ಹಲವು ವರ್ಷಗಳ ಬಳಿಕ ಎಐಸಿಸಿ ಮಹಾಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸುವ ಸಾಧ್ಯತೆಯಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಆಗಿರುವ...
ಜಿ. ಪರಮೇಶ್ವರ್
ಜಿ. ಪರಮೇಶ್ವರ್

ಬೆಂಗಳೂರು:  ಹಲವು ವರ್ಷಗಳ ಬಳಿಕ ಎಐಸಿಸಿ ಮಹಾಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸುವ ಸಾಧ್ಯತೆಯಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ರವರು ಪಕ್ಷದ ವರಿಷ್ಠರೊಂದಿಗೆ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ.

ಮುಂಬರುವ ಮೇ ತಿಂಗಳಲ್ಲಿ ಎಐಸಿಸಿ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೇ ಅಧಿವೇಶನ ಆಯೋಜಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಪ್ರಸ್ತಾವನೆಗೆ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ಮಹಾಅಧಿವೇಶನ ನಡೆಸುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ಮಹಾತ್ವಾಕಾಂಕ್ಷೆಯನ್ನು ಹೊಂದಲಾಗಿದೆ. ಹೀಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ,  ರಾಹುಲ್ ಗಾಂಧಿ, ರಾಜ್ಯದ ಹೊಣೆ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರೊಂದಿಗೆ ಪರಮೇಶ್ವರ್ ಈ ಸಂಬಂಧ ಚರ್ಚಿಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com