
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ಕೈಗಡಿಯಾರ ವಿವಾದ ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿದ್ದೆಗೆಡಿಸಿದ್ದು, ಈ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ತಮ್ಮ ದುಬಾರಿ ವಾಚ್ ವಿವಾದವನ್ನು ಸರಿಯಾಗಿ ನಿಭಾಯಿಲ್ಲ ಹಾಗೂ ಈ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ನೀಡಲು ವಿಫರಾಗಿರುವ ಕುರಿತಂತೆ ಸೋನಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷಕರನ್ನು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದರು. ಭೇಟಿ ವೇಳೆ ರಾಜ್ಯದ ಪರಿಸ್ಥಿತಿ ಹಾಗೂ ಪ್ರಗತಿ ವರದಿಯನ್ನು ಸಲ್ಲಿಸಿದ್ದರು. ಈ ವೇಳೆ ದುಬಾರಿ ವಾಚ್ ವಿವಾದವನ್ನು ಸೋನಿಯಾ ಗಾಂಧಿಯವರು ಪ್ರಸ್ತಾಪ ಮಾಡಿದ್ದಾರೆ. ನಂತರ ಈ ಕುರಿತಂತೆ ಪರಮೇಶ್ವರ್ ಅವರ ಬಳಿ ಪ್ರಶ್ನೆಗಳನ್ನು ಕೇಳಿದ್ದಾರೆ. ಸೋನಿಯಾ ಅವರ ಪ್ರಶ್ನೆಗೆ ಉತ್ತರಿಸಲಾಗದ ಪರಮೇಶ್ವರ್ ಅವರು ಚಡಪಡಿಸಿದ್ದಾರೆಂದು ಹೇಳಲಾಗುತ್ತಿದೆ.
ನಂತರ ಮಾತನಾಡಿರುವ ಸೋನಿಯಾ ಅವರು, ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರಬಲ ಹೋರಾಟವನ್ನು ಮಾಡುತ್ತಿದೆ. ಮೋದಿಯವರನ್ನು ಸೂಟು-ಬುಟು ಸರ್ಕಾರವೆಂದು ಹೇಳಿ ಟೀಕೆಗಳನ್ನು ಮಾಡುತ್ತಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿಷಯ ಸಿಕ್ಕಿಹಾಕಿಕೊಂಡರೆ ಸಮರ್ಥನೆಕೊಡುವುದಾದರೂ ಹೇಗೆ? ನಮ್ಮ ಪರಿಸ್ಥಿತಿ ಏನಾಗುತ್ತದೆ? ಎಂದು ಕೇಳಿದ್ದಾರೆ. ಅಲ್ಲದೆ, ವಾಚ್ ಬಗ್ಗೆ ವಿವಗಳನ್ನು ಸಲ್ಲಿಸುವಂತೆ ತಿಳಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
Advertisement