ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು
ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು

ಕಳಸಾ ಬಂಡೂರಿ ವಿವಾದ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಆಗ್ರಹ

ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಮಹಾದಾಯಿ– ಕಳಸಾ ಬಂಡೂರಿ ವಿವಾದವನ್ನು ಬಗೆಹರಿಸಬೇಕೆಂದು ಎಂದು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಮಹಾದಾಯಿ– ಕಳಸಾ ಬಂಡೂರಿ ವಿವಾದವನ್ನು ಬಗೆಹರಿಸಬೇಕೆಂದು ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ. 
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಎದ್ದಿರುವ ಕಳಸಾ ಬಂಡೂರಿ, ಮಹಾದಾಯಿ ಯೋಜನೆಯ ವಿವಾದವನ್ನು ಪ್ರಧಾನಿಗಳು ಮಧ್ಯ ಪ್ರವೇಶಿಸಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಧರಣಿ ನಡೆಸಿದರು.
ವಿವಾದ ಬಗೆಹರಿಸಲು ಸರ್ಕಾರ ಮತ್ತೊಮ್ಮೆ ಪ್ರಯತ್ನಿಸಿ, ಪ್ರಧಾನಿ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ. 
ಈ ಕುರಿತು ಪ್ರತಿಕ್ರಯಿಸಿದ ಜಲಸಂಪನ್ಮೂಲ ಸಚಿವ ಎಂಬಿ ಪಾಟಿಲ್ ಅವರು, ಕಳಸಾ ಬಂಡೂರಿ ಯೋಜನೆ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಸ್ಪೀಕರ್ ಕಾಗೋಡು ತಿಮ್ಮನವರಿಗೆ ತಿಳಿಸಿದ್ದಾರೆ. 
ಇನ್ನು ಜೆಡಿಎಸ್ ನ ಎನ್ ಎಚ್ ಕೋನರೆಡ್ಡಿ ಅವರು, ಕಳಸಾ- ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಆ ಭಾಗದ ಜನರು 250ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳಗಾವಿಗೆ ಪ್ರಧಾನಿ ಬಂದಾಗಲೂ ಏನೂ ಹೇಳಲಿಲ್ಲ ಎಂದು ಆರೋಪಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

Related Stories

No stories found.

Advertisement

X
Kannada Prabha
www.kannadaprabha.com