ವಕ್ಫ್ ಆಸ್ತಿ ಕಬಳಿಕೆ ವಿಚಾರ: ವರದಿ ನೀಡಲು ಸಿಎಂಗೆ ಗವರ್ನರ್ 24 ಗಂಟೆ ಡೆಡ್ ಲೈನ್

ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಬಗ್ಗೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ....
ವಜೂಭಾಯ್ ವಾಲಾ
ವಜೂಭಾಯ್ ವಾಲಾ

ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಬಗ್ಗೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ. ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ವರದಿ ಮಂಡಿಸದೇ ಇರುವುದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ರಾಜ್ಯಪಾಲರು ಕಳವಳ ವ್ಯಕ್ತಪಡಿಸಿದ್ದಾರೆ.

ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಂಗಳವಾರ ರಾಜ್ಯಪಾಲರಿಗೆ ದೂರು ನೀಡಿದ್ದವು.

ದೂರಿನ ಹಿನ್ನೆಲೆಯಲ್ಲಿ ಇದೀಗ ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಕುರಿತ ವರದಿಯನ್ನು 24 ಗಂಟೆಯೊಳಗೆ ನೀಡುವಂತೆ ರಾಜ್ಯಪಾಲರು ಸಿಎಂಗೆ ಸೂಚನೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ದಿನದಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com