ನಮ್ಮ ಪ್ರತಿಭಟನೆಯನ್ನು ಹಗುರವಾಗಿ ಪರಿಗಣಿಸಬೇಡಿ: ಸಿದ್ದುಗೆ ಬಿಎಸ್ ವೈ ಎಚ್ಚರಿಕೆ

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯಾಧ್ಯಕ್ಷ ಬಿ.ಎಸ್ ...
ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದ ಆರ್ ಅಶೋಕ್, ಮತ್ತು ಯಡಿಯೂರಪ್ಪ
ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದ ಆರ್ ಅಶೋಕ್, ಮತ್ತು ಯಡಿಯೂರಪ್ಪ

ಬೆಂಗಳೂರು: ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ  ಬಿಜೆಪಿ ನಡೆಸಿದ ಪ್ರತಿಭಟನೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್ .ಅಶೋಕ್ ನೇತೃತ್ವದಲ್ಲಿ ಕಂಠೀರವ ಕ್ರೀಡಾಂಗಣ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ  ಮುಂದಿನ ದಿನಗಳಲ್ಲಿ  ತೀವ್ರ ಹೋರಾಟ ನಡೆಸುತ್ತೇವೆ, ಇದು ಕೇವಲ ಆರಂಭ ಅಷ್ಟೇ ಎಂದು ಗುಡುಗಿದ್ದಾರೆ.ಟ

ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿಯ ಕೆಲ ಕೌನ್ಸಿಲರ್ ಗಳನ್ನು ಅಮಾನತುಗೊಳಿಸಲಾಗಿದೆ. ಧೈರ್ಯವಿದ್ದರೇ ಬಿಜೆಪಿಯ 110 ಸದಸ್ಯರನ್ನು ಅಮಾನತುಗೊಳಿಸಲಿ ಎಂದು ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆ ನಡೆಸಲು ಬಿಜೆಪಿ 11 ತಂಡಗಳನ್ನು ರಚಿಸಲಾಗಿದೆ. ಬಿಜೆಪಿ ಮೊದಲು ಬರ ಪರಿಶೀಲನೆ ಕಾರ್ಯ ಹಮ್ಮಿಕೊಂಡಿತು, ಇದನ್ನು ನೋಡಿದ ನಂತರ ಕಾಂಗ್ರೆಸ್ ಬರ ಪರಿಶೀಲನೆ ಕಾರ್ಯ ಕೈಗೊಂಡಿತು ಎಂದು ಆರೋಪಿಸಿದರು.

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ಕಟ್ಟಾಸುಬ್ರಮಣ್ಯ ನಾಯ್ಡು, ವಿ. ಸೋಮಣ್ಣ, ವಿಜಯ್ ಕುಮಾರ್, ಮುನಿರಾಜು ಹಾಗೂ ಬಿಬಿಎಂಪಿಯ ಬಿಜೆಪಿ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com