ಕಲಬುರ್ಗಿಯಲ್ಲೂ 'ಕೈ'ತಪ್ಪಿದ ಜಿ.ಪಂ.ಅಧಿಕಾರ: ಅಧ್ಯಕ್ಷ, ಉಪಾಧ್ಯಕ್ಷ ಬಿಜೆಪಿ ತೆಕ್ಕೆಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಮುಖಭಂಗ ಅನುಭವಿಸಿದ್ದ ಕಾಂಗ್ರೆಸ್, ಕಲಬುರ್ಗಿ ಜಿಲ್ಲಾ ಪಂಚಾಯತ್...
ಅಧ್ಯಕ್ಷೆ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಅಭ್ಯರ್ಥಿಗಳು
ಅಧ್ಯಕ್ಷೆ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಅಭ್ಯರ್ಥಿಗಳು
ಕಲಬುರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಮುಖಭಂಗ ಅನುಭವಿಸಿದ್ದ ಕಾಂಗ್ರೆಸ್, ಕಲಬುರ್ಗಿ ಜಿಲ್ಲಾ ಪಂಚಾಯತ್ ನಲ್ಲೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ.
ನಿರೀಕ್ಷೆಯಂತೆ ಕಲಬುರ್ಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವು ಬಿಜೆಪಿ ಪಾಲಾಗಿದ್ದು, ಅಧ್ಯಕ್ಷೆಯಾಗಿ ತಡಕಲ್ ಕ್ಷೇತ್ರದ ಸುವರ್ಣಾ ಮಲಾಜಿ ಹಾಗೂ ಉಪಾಧ್ಯಕ್ಷೆಯಾಗಿ ಗೊಬ್ಬುರು ಬಿ ಕ್ಷೇತ್ರದ  ಶೋಭಾ ಶಿರಸಗಿ ಅವರು ಆಯ್ಕೆಯಾಗಿದ್ದಾರೆ.
47 ಸದಸ್ಯ ಬಲವಿರುವ ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಸರಳ ಬಹುಮತ ಹೊಂದಿದ್ದು, 21 ಸ್ಥಾನದಲ್ಲಿ ಗೆದ್ದಿದ್ದ ಕಾಂಗ್ರೆಸ್ ಜೆಡಿಎಸ್ ಮತ್ತು ಜೆಡಿಯೂ ನ ಏಕೈಕ ಸದಸ್ಯರನ್ನು ಸೇರಿಸಿಕೊಂಡು, ಕೆಲ ಬಿಜೆಪಿ ಸದಸ್ಯರು ಮತದಾನದಿಂದ ಹೊರಗುಳಿಯುವಂತೆ ಮಾಡಿ ಅಧಿಕಾರಕ್ಕೇರುವ ಯೋಜನೆಯಲ್ಲಿತ್ತು. ಆದರೆ ಅಂತಿಮವಾಗಿ ಕೈತಂತ್ರ ಫಲ ನೀಡಿಲ್ಲ.
ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಸುವರ್ಣಾ ಮಲಾಜಿ ಗೆ 25 ಮತಗಳು ಹಾಗೂ ಕಾಂಗ್ರೆಸ್ ನ ವಿಜಯಲಕ್ಷ್ಮಿ ತಡಕಲ್ ಪರವಾಗಿ 22 ಮತಗಳ ಚಲಾವಣೆಯಾಗಿವೆ ಎಂದು ಚುನಾವಣಾ ಅಧಿಕಾರಿಯೂ ಆದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಉಪಾಧ್ಯಕ್ಷ ಎಸ್ ಸಿ ಮಹಿಳೆಗೆ ಮೀಸಲಾಗಿತ್ತು. ಹೀಗಾಗಿ ಕಲಬುರ್ಗಿ ಜಿಲ್ಲಾ ಪಂಚಾಯ್ತಿ ಮಹಿಳೆಯರ ಪಾಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com