ರಾಜ್ಯಪಾಲರಿಗೆ ಬರ ಪ್ರವಾಸದ ವರದಿ ಸಲ್ಲಿಸಿದ ಬಿಜೆಪಿ ನಾಯಕರು

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ರಾಜಭವನಕ್ಕೆ ಭೇಟಿ ನೀಡಿ
ಬಿಜೆಪಿ ನಾಯಕರ ನಿಯೋಗ
ಬಿಜೆಪಿ ನಾಯಕರ ನಿಯೋಗ
Updated on: 
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಬರ ಪ್ರವಾಸ ಅಧ್ಯಯನದ ವರದಿ ಸಲ್ಲಿಸಿತು. 
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ರಾಜ್ಯದಲ್ಲಿ ಬರ ಪರಿಸ್ಥಿತಿ ಅಸಹನೀಯವಾಗಿದ್ದು, ಸ್ಪಂದಿಸಬೇಕಿದ್ದ ಸರ್ಕಾರ ಸತ್ತಿದೆಯೋ? ಬದುಕಿದೆಯೋ? ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪರಿಹಾರ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿರುವ ಹಣವನ್ನು ಮೊದಲ ಸರಿಯಾಗಿ ಖರ್ಚು ಮಾಡಲಿ ಎಂದ ಯಡಿಯೂರಪ್ಪ, ರಾಜ್ಯಪಾಲರಿಗೆ ಸರ್ಕಾರದ ವೈಫಲ್ಯದ ಬಗ್ಗೆ ದೊಡ್ಡ ಪಟ್ಟಿಯನ್ನೇ ಕೊಟ್ಟಿದ್ದೇವೆ ಎಂದರು.
ಇದೇ ವೇಳೆ ರಾಜ್ಯಪಾಲರು ಸಿಎಂಗೆ ಪತ್ರ ಬರೆದ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ರಾಜ್ಯಪಾಲರು ಅವರ ಅಭಿಪ್ರಾಯವನ್ನು ಹೇಳಿದ್ದಾರೆ. ಮೊದಲು ಕೇಂದ್ರ ಸರ್ಕಾರ ನೀಡಿರುವ ಹಣವನ್ನು ಸಿದ್ದರಾಮಯ್ಯ ಖರ್ಚು ಮಾಡಲಿ, ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸೋದು ಸರಿಯಲ್ಲ ಎಂದರು.
ಬರ ಪರಿಹಾರ ಕಾಮಗಾರಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ಜವಾಬ್ದಾರಿ ನಿಭಾಯಿಸುವಲ್ಲಿ ಸಚಿವರುಗಳು ಸೋತಿದ್ದಾರೆ. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಹಾಗೂ ಬರ ಪರಿಸ್ಥಿತಿ ಇರುವುದರಿಂದ ರೈತರ ಸಾಲ ಮನ್ನಾ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಬಿಎಸ್ ವೈ ತಿಳಿಸಿದರು.
ನಿಯೋಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಸುರೇಶ್ ಕುಮಾರ್, ಸಿ.ಟಿ.ರವಿ, ಆರ್. ಅಶೋಕ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com