ಬೆಂಗಳೂರು: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್ 9ರಂದು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದೆ.
ಜುಲೈ 4ಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಗೋಮಧುಸೂದನ್, ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ, ಎಂ.ಕೌಜಲಗಿ ಹಾಗೂ ಅರುಣ್ ಶಾಹಪುರ್ ಅವರ ಪರಿಷತ್ ಸದ್ಯಸರ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಮೇ 16ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದೆ.
ನಾಮಪತ್ರ ಸಲ್ಲಿಸಲು ಮೇ 23 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 26 ಕೊನೆಯ ದಿನವಾಗಿದೆ. ಜೂನ್ 13ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.