ಪ್ರಿಯಾಂಕ ಬಂದರೆ ಮಾತ್ರ ಗೆಲುವು ಸಾಧ್ಯ: ಯುಪಿ ಕಾಂಗ್ರೆಸ್ ಕಾರ್ಯಕರ್ತರು

ಪ್ರಿಯಾಂಕ ಗಾಂಧಿ ಬಂದರೆ ಮಾತ್ರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲೆಕಂಡುಕೊಳ್ಳಲು ಸಾಧ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ್ದಾರೆ...
ಪ್ರಿಯಾಂಕ ಗಾಂಧಿ
ಪ್ರಿಯಾಂಕ ಗಾಂಧಿ
Updated on: 

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬ ಕೂಗು ದಿನೇ ದಿನೇ ಹೆಚ್ಚಾಗುತ್ತಿದೆ, ಪ್ರಿಯಾಂಕ ಗಾಂಧಿ ಬಂದರೆ ಮಾತ್ರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲೆಕಂಡುಕೊಳ್ಳಲು ಸಾಧ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ್ದಾರೆ.

2017ರ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಯುಪಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ್ದರು. ಈ ವೇಳೆ 600 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಿಯಾಂಕಾ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆ ತರುವಂತೆ ಒತ್ತಾಯಿಸಿದ್ದಾರೆ.

2017 ರ ನಿರ್ಣಾಯಕ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕಾ ಬಂದರೆ ಮಾತ್ರ ಕಾಂಗ್ರೆಸ್ ಜಯಗಳಿಸಲು ಸಾಧ್ಯ ಎಂದು, ಪ್ರಿಯಾಂಕಾ ಒಬ್ಬರಿಂದ ಮಾತ್ರ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯವಾಗುವುದು ಎಂದು ಆಗ್ರಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದುಶ್ಯಂತ್ ಶರ್ಮಾ ಹೇಳಿದ್ದಾರೆ.

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ನಾಯಕತ್ವ ವಹಿಸಿದರೇ , ಕಾಂಗ್ರೆಸ್ ಯುಪಿಯಲ್ಲಿ ಮತ್ತೆ ತನ್ನ ಹಳೇಯ ಸುವರ್ಣ ಯುಗವನ್ನು ಮತ್ತೆ ಕಾಣಬಹುದು ಎಂದು ಪ್ರಶಾಂತ್ ಕಿಶೋರ್ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com