ರಾಜ್ಯ ಕಾಂಗ್ರೆಸ್ ಗೆ ಮೇಜರ್ ಸರ್ಜರಿ: ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ?

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಗೆ ಮೇಜರ್ ಸರ್ಜರಿ ನಡೆಸಲು ಹೈ ಕಮಾಂಡ್ ತೀರ್ಮಾನಿಸಿದೆ...
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ನವದೆಹಲಿ: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಗೆ ಮೇಜರ್ ಸರ್ಜರಿ ನಡೆಸಲು ಹೈ ಕಮಾಂಡ್ ತೀರ್ಮಾನಿಸಿದೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಲಾಗುವುದು. ಬೆಂಗಳೂರಲ್ಲಿ ನಡೆಸಬೇಕು ಎಂದು ಉದ್ದೇಶಿಸಿರುವ ಎಐಸಿಸಿ ಅಧಿವೇಶನದ ಬಗ್ಗೆ ಚರ್ಚೆ ನಡೆಸಲು ಎಐಸಿಸಿ ಅಧ್ಯಕ್ಷೆ  ಸೋನಿಯಾ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

ಈ ಭೇಟಿಯ ವೇಳೆ  ಸೋನಿಯಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮತ್ತು ರಾಹುಲ್ ಗಾಂಧಿ ಈ ವೇಳೆ ಉಪಸ್ಥಿತರಿದ್ದರು.

ಇನ್ನು ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಮತ್ತೆ ಭಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಅದೇ ವೇಳೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರ ಕೂಡ ಅಂತಿಮಗೊಳ್ಳಲಿದೆ.

ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್ ಇಬ್ಬರು ಹಿಂದುಳಿದ ವರ್ಗದ ನಾಯಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ರನ್ನಾಗಿ ಲಿಂಗಾಯಿತ ಇಲ್ಲವೇ  ಒಕ್ಕಲಿಗರನ್ನು ನೇಮಿಸಲು ಹೈಕಮಾಂಡ್ ನಿರ್ಧರಿಸಿದೆ,

ಲಿಂಗಾಯತರಾಗಿರುವ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ಮೇಲ್ವರ್ಗದ ನಾಯಕನನ್ನೇ ಆರಿಸಲು ತೀರ್ಮಾನಿಸಿದೆ.

ಇನ್ನೂ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಕೆಪಿಸಿಸಿಗೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ನೇಮಿಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com