ರಾಜ್ಯಸಭೆ ಚುನಾವಣೆ: ರಾಮಮೂರ್ತಿಯನ್ನು 3ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು 'ಕೈ' ನಿರ್ಧಾರ

ರಾಜ್ಯಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು,...
ಕೆ.ಸಿ.ರಾಮೂರ್ತಿ
ಕೆ.ಸಿ.ರಾಮೂರ್ತಿ
Updated on: 
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಅವರಿಗೆ ಟಿಕೆಟ್ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸೂಚಿಸಿಲಾಗಿದೆ.
ಕೆ.ಸಿ.ರಾಮೂರ್ತಿ ಅವರಿಗೆ ಟಿಕೆಟ್ ನೀಡುವಂತೆ ದಿಗ್ವಿಜಯ್ ಸಿಂಗ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಸೂಚಿಸಿದ್ದಾರೆ,
ರಾಜ್ಯಸಭೆಗೆ ನಿನ್ನೆ 8 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್, ಕರ್ನಾಟಕದಿಂದ ಆಸ್ಕರ್‌ ಫ‌ರ್ನಾಂಡಿಸ್‌ ಮತ್ತು ಜೈರಾಂ ರಮೇಶ್‌ ಅವರನ್ನು ಆಯ್ಕೆ ಮಾಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದ ಮೂರನೇ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿತ್ತು.
ಈಗ ಮೂರನೇ ಅಭ್ಯರ್ಥಿಯಾಗಿ ರಾಮಮೂರ್ತಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದ್ದು, ಅವರ ವಿರುದ್ಧ ಜೆಡಿಎಸ್‌ ನಿಂದ ಬಿ.ಎ. ಫ‌ರೂಕ್‌ ಅವರು ಕಣಕ್ಕಿಳಿಯಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಠಕ್ಕೆ ಬಿದ್ದಿದ್ದರೆ, ತಿರುಗೇಟು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. 
ಕಾಂಗ್ರೆಸ್‌ ತನ್ನ ಹೆಚ್ಚುವರಿ ಮತಗಳಾದ 32, ಪಕ್ಷೇತರರಿಂದ 9 ಹಾಗೂ ಜೆಡಿಎಸ್‌ ಭಿನ್ನಮತೀಯರ ಐದು ಮತಗಳನ್ನು ನಂಬಿಕೊಂಡು ರಾಮಮೂರ್ತಿ ಅವರನ್ನು ಕಣಕ್ಕಿಳಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com