ಜಮೀರ್ ಅಹ್ಮದ್ ರಿಂದ ಜೆಡಿಎಸ್ ಗೆ ಸಾಕಷ್ಟು ಡ್ಯಾಮೇಜ್ ಆಗುತ್ತಿದೆ: ಎಚ್ ಡಿಕೆ

ಜೆಡಿಎಸ್ ನಲ್ಲಿ ಮತ್ತೊಮ್ಮೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು...
ಎಚ್.ಡಿ.ಕುಮಾರಸ್ವಾಮಿ, ಜಮೀರ್ ಅಹ್ಮದ್
ಎಚ್.ಡಿ.ಕುಮಾರಸ್ವಾಮಿ, ಜಮೀರ್ ಅಹ್ಮದ್
Updated on: 
ಬೆಂಗಳೂರು: ಜೆಡಿಎಸ್ ನಲ್ಲಿ ಮತ್ತೊಮ್ಮೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಡಿಕೆ, ಜಮೀರ್ ಅಹ್ಮದ್ ಖಾನ್ ಅವರಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಗುತ್ತಿದೆ. ಕಳೆದ ಹೆಬ್ಬಾಳ ಉಪ ಚುನಾವಣೆ ವೇಳೆ ಪಕ್ಷಕ್ಕಿಂತ ಧರ್ಮ ಹಾಗೂ ಜಾತಿ ದೊಡ್ಡದು ಎಂದು ಹೇಳಿದ್ದೀರಿ. ಈಗ ರಾಜ್ಯಸಭೆ ಚುನಾವಣೆಯಲ್ಲಿ ನಿಮ್ಮದೇ ಧರ್ಮದ ಅಭ್ಯರ್ಥಿಯನ್ನು ಏಕೆ ಬೆಂಬಲಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ, ಅಲ್ಲದೆ ಈ ಗ ಜಮೀರ್ ಅಹ್ಮದ್ ಬಣ್ಣ ಬಯಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದಾಗಿ ಜಮೀರ್ ಅಹ್ಮದ್ ಅವರು ಮಾತ್ರ ಹೇಳಿದ್ದಾರೆ. ಉಳಿದ ನಾಲ್ವರು ನಮ್ಮೊಂದಿಗೆ ಇದ್ದಾರೆ ಎಂದ ಎಚ್ ಡಿಕೆ, ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಲ್ಲ ಎಂದಿದ್ದಾರೆ. ಅಲ್ಲದೆ ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಎಚ್ಚರಿಸಿದ್ದಾರೆ,
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೂಪಾರಿ ಪಡೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com