ರಾಜ್ಯಸಭೆ ಚುನಾವಣೆ: ಆಸ್ಕರ್‌ ಫರ್ನಾಂಡಿಸ್, ಜೈರಾಮ್‌ ರಮೇಶ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಜೈರಾಮ್ ರಮೇಶ್, ಪರಮೇಶ್ವರ, ಆಸ್ಕರ್ ಫರ್ನಾಂಡಿಸ್ ಹಾಗೂ ಇತರರು
ಜೈರಾಮ್ ರಮೇಶ್, ಪರಮೇಶ್ವರ, ಆಸ್ಕರ್ ಫರ್ನಾಂಡಿಸ್ ಹಾಗೂ ಇತರರು
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. 
ಚುನಾವಣಾ ಅಧಿಕಾರಿಗಳೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಸ್. ಮೂರ್ತಿ ಅವರಿಗೆ ಈ ಇಬ್ಬರು ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನಖರ್ಗೆ, ಆರ್.ವಿ. ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆರ್.ಬಿ. ತಿಮ್ಮಾಪುರ್, ವೀಣಾಅಚ್ಚಯ್ಯ, ರಿಜ್ವಾನ್ ಹರ್ಷದ್ ನಾಮಪತ್ರ ಸಲ್ಲಿಸಿದರೆ, ಮತ್ತೊಬ್ಬ ಅಭ್ಯರ್ಥಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂವೀರಭದ್ರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ತನ್ನ ಸಂಖ್ಯಾಬಲದೊಂದಿಗೆ ಇಬ್ಬರು ಅಭ್ಯರ್ಥಿಗಳನ್ನು ಅನಾಯಾಸವಾಗಿ ರಾಜ್ಯಸಭೆಗೆ ಆಯ್ಕೆ ಮಾಡಬಹುದಾಗಿದೆ. ತನ್ನ ಬಳಿ ಉಳಿಯುವ 33 ಹೆಚ್ಚುವರಿ ಮತಗಳು ಹಾಗೂ ಪಕ್ಷೇತರರು ಜೆಡಿಎಸ್‌ನ ಅತೃಪ್ತ ಶಾಸಕರ ಬೆಂಬಲ ಪಡೆದು ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಕಸರತ್ತು ನಡೆಸಿದೆ. ಉಳಿದಂತೆ ವಿಧಾನಪರಿಷತ್‌ಗೆ ತನ್ನ ಸಂಖ್ಯಾಬಲದಿಂದ ನಾಲ್ವರನ್ನು ಸುಲಭವಾಗಿ ಆಯ್ಕೆ ಮಾಡಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com