ನನ್ನ ಮಗ 200 ಎಕರೆ ಜಮೀನು ಹೊಂದಿಲ್ಲ: ಎಚ್.ಡಿ ದೇವೇಗೌಡ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು 200 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂಬ ಎಸ್‌.ಆರ್‌. ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು 200 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ  ಎಂಬ ಎಸ್‌.ಆರ್‌. ಹಿರೇಮಠ ಆರೋಪವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ತಳ್ಳಿ ಹಾಕಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಬಳಿ 80 ಎಕರೆ ಮಾತ್ರ ಭೂಮಿ ಇದೆ. ಅದಕ್ಕೂ ಮೀರಿ ಅವರ ಬಳಿ ಯಾವ ಜಮೀನು ಎಲ್ಲ ಎಂದು ಸ್ಪಷ್ಟನೆ ನೀಡಿದರು.

ನನ್ನ ಕುಟುಂಬದ ವಿರುದ್ಧ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದಾಗ ಲೋಕಾಯುಕ್ತ ತನಿಖೆ ನಡೆದಿದೆ. ಬಂಗಾರಪ್ಪ, ಯಡಿಯೂರಪ್ಪ ಅವರ ಕಾಲದಲ್ಲಿಯೂ ಸಿಓಡಿ ತನಿಖೆಗಳು ಆಗಿವೆ. ಆದರೆ, ಎಲ್ಲಿಯೂ ಅಕ್ರಮ  ನಡೆದಿರುವುದು ಸಾಬೀತಾಗಿಲ್ಲ ಎಂದು ಹೇಳಿದ್ದಾರೆ.

ಬಿಡದಿಯಲ್ಲಿ ಕುಮಾರಸ್ವಾಮಿ ಅವರಿಗೆ ಸೇರಿದ 70ರಿಂದ 80 ಎಕರೆ ಜಮೀನು ಇರಬಹುದು. ಆದರೆ, 200 ಎಕರೆ ಎಲ್ಲಿಂದ ಬರಬೇಕು. ನಮ್ಮ ಕುಟುಂಬವನ್ನು ರಾಜಕೀಯವಾಗಿ ತುಳಿಯಬೇಕು ಎಂಬ  ಉದ್ದೇಶದಿಂದ ಇಂಥ ಆರೋಪಗಳನ್ನು ಮೊದಲಿನಿಂದಲೂ ಮಾಡಿಕೊಂಡು ಬರಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com