ಮುಂದಿನ 6 ತಿಂಗಳಲ್ಲಿ ಹಲವು ರಾಜಕೀಯ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ರಾಜ್ಯ: ಎಚ್ ಡಿಕೆ

ಮುಂದಿನ ಆರು ತಿಂಗಳಲ್ಲಿ ರಾಜ್ಯ ರಾಜಕೀಯ ಹಲವು ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 

ಬೆಳಗಾವಿ: ಮುಂದಿನ ಆರು ತಿಂಗಳಲ್ಲಿ ರಾಜ್ಯ ರಾಜಕೀಯ ಹಲವು ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕತ್ವದಿಂದ ರಾಜ್ಯದ ಜನತೆ ಅಸಮಾಧಾನ ಗೊಂಡಿದ್ದಾರೆ ಎಂದರು.

ತಿಂಗಳಿನ ಕೆಲ ದಿನಗಳು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುತ್ತೇನೆ. ಉತ್ತರ ಕರ್ನಾಟಕದಲ್ಲಿ ತಮ್ಮ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಮನೆ ಮಾಡಿರುವುದಾಗಿ ತಿಳಿಸಿದರು.

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿ ಅಥವಾ ವಿಜಾಯಾಪುರದಿಂದ ಸ್ಪರ್ಧಿಸಲು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ, ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತರ ಕರ್ನಾಟಕದಲ್ಲಿ ಸುಮಾರು 35-40 ಸೀಟುಗಳಲ್ಲಿ ಗೆಲುವು ಪಡೆಯಲಿದೆ ಎಂದರು.

ನವೆಂಬರ್ 20 ರಿಂದ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಮಹಾದಾಯಿ ನೀರು ಹಂಚಿಕೆ ವಿವಾದ ಸಂಬಂಧ ಸದನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com