

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಆರಂಭವಾಗಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಸ್ಥಿತಿ ಬಗ್ಗೆ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅಧಿವೇಶನದಲ್ಲಿ ಪಾಲ್ಗೋಳ್ಳಬೇಕಾದ ಸಂಬಂಧ ನಡೆಸಿದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಯಶಸ್ವಿಯಾಗಿದೆ, ಬರಪರಿಸ್ಥಿತಿ ನಿರ್ವಹಿಸಲು ಸರ್ಕಾರ ವಿಫಲವಾಗಿದೆ ಈ ಸಂಬಂಧ ಸರ್ಕಾರದ ಗಮನ ಸೆಳೆಯುವ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬರ ಪರಿಸ್ಥಿತಿ ಚರ್ಚೆ ನಂತಕ ಮಹಾದಾಯಿ ನದಿ ಯೋಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಹೇಳಿದ್ದಾರೆ. ಚಳಿಗಾಲದ ಅಧಿವೇಶನ ಬರ ಪರಿಸ್ಥಿತಿ ಮತ್ತು ಮಹಾದಾಯಿ ಯೋಜನೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುವುದು ಎಂದರು. ಇನ್ನೂ ರೈತರ ಮೇಲಿನ ಕೇಸ್ ವಿಥ್ ಡ್ರಾ ಮಾಡುತ್ತೇನೆ ಎಂದು ಹೇಳಿದ ಸರ್ಕಾರ ಇದುವರೆಗೂ ಒಬ್ಬ ರೈತನ ಮೇಲಿನ ಕೇಸ್ ವಾಪಸ್ ತೆಗೆದುಕೊಂಡಿಲ್ಲ , ಈ ಬಗ್ಗೆಯೂ ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.