ಬಂಧಿತ ರೈತರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ; ಬಿಜೆಪಿ ಆಕ್ರೋಶ

ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಂಧನಕ್ಕೆ ವಿರೋಧ ಪಕ್ಷ ಬಿಜೆಪಿ ತೀವ್ರ ಆಕ್ರೋಶ ...
ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರು
ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರು
Updated on

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಂಧನಕ್ಕೆ ವಿರೋಧ ಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ.

ಯಾವುದೇ ತಪ್ಪು ಮಾಡದಿದ್ದರೂ ರೈತರ ಬಂಧಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತ ಪಡಿಸಿ ಕೂಡಲೇ ಬಿಜುಗಡೆಗೊಳಿಸುವಂತೆ ಆಗ್ರಹಿಸಿದರು.

ಮಹಾದಾಯಿ ಸೇರಿದಂತೆ ಇತರೆ ಹೋರಾಟಗಳಲ್ಲಿ ರೈತರ ವಿರುದ್ಧ ದಾಖಲಿಸಿರುವ ಕೇಸುಗಳನ್ನ ವಾಪಸ್ ಪಡೆಯಬೇಕು, ರೈತರನ್ನು ಭಯೋತ್ಪಾದಕರಂತೆ ಹಾಗೂ ಡಕಾಯಿತರ ರೀತಿ ನೋಡಲಾಗುತ್ತಿದೆ ಎಂದು ಆರೋಪಿಸಿದ ಅವರು ಈ ಕೂಡಲೇ ಬಂಧಿತ ರೈತರನ್ನು ಬಿಡುಗಡೆ ಗೊಳಿಸುವಂತೆ ಆಗ್ರಹಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದಲೂ ಬರದಿಂದ ತತ್ತರಿಸಿರುವ ರೈತನ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ಬಂಡಾಯ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಆಕ್ಷೇಪ ವ್ಯಕ್ತ ಪಡಿಸಿದ ಅವರು, ಸುವರ್ಣ ಸೌಧದ ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಿಸುವ ಅವಶ್ಯಕತೆ ಏನು ಇತ್ತು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com