ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ: ಯಡಿಯೂರಪ್ಪ

ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಕಾವೇರಿ ಹಾಗೂ ಕಳಸಾ ಬಂಡೂರಿ ನದಿ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲಾಗುವುದು ಎಂದು ...
ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ನಾಯಕರು
ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ನಾಯಕರು
Updated on: 

ಬೆಂಗಳೂರು: ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಕಾವೇರಿ ಹಾಗೂ ಕಳಸಾ ಬಂಡೂರಿ ನದಿ ನೀರಿನ ಸಮಸ್ಯೆಗಳಿಗೆ  ಪರಿಹಾರ ಕಂಡು ಹಿಡಿಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಏಕತಾ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ಇನ್ನು ನೋಟು ನಿಷೇಧ ವಿರೋಧಿಸಿ ಹಮ್ಮಿಕೊಂಡಿರುವ ಆಕ್ರೋಶ್ ದಿವಸಕ್ಕೆ ಬದಲಾಗಿ ಸಂಭ್ರಮ ದಿವಸ್ ಆಚರಿಸುತ್ತಿರುವುದಾಗಿ ಹೇಳಿದ ಯಡಿಯೂರಪ್ಪ ಕೇಂದ್ರದಲ್ಲಿ ಮೋದಿ ಸರ್ಕಾರದ ಕೈ ಬಲಪಡಿಸಲು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದರು.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್. ಆಶೋಕ್ ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಸುತ್ತಿರುವ ಕೆಎಫ್ ಡಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com