ಶಾಸಕಸ್ಥಾನ, ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೂ ರಾಜಿನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ (ಸಂಗ್ರಹ ಚಿತ್ರ)
ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ (ಸಂಗ್ರಹ ಚಿತ್ರ)

ಬೆಂಗಳೂರು: ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೂ ರಾಜಿನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಪೀಕರ್ ಕೆಬಿ ಕೋಳಿವಾಡ ಅವರನ್ನು ಭೇಟಿ ಮಾಡಿದ ಶ್ರೀನಿವಾಸ ಪ್ರಸಾದ್ ಅವರು, ತಾವೇ ಖುದ್ಧು ರಾಜಿನಾಮೆ ಪತ್ರ ಬರೆದು ಸಲ್ಲಿಸಿದ್ದಾರೆ. ಆದರೆ  ಶ್ರೀನಿವಾಸ ಪ್ರಸಾದ್ ಅವರ ರಾಜಿನಾಮೆ ಪತ್ರ ಪರಿಶೀಲನೆಯಲ್ಲಿದ್ದು, ರಾಜಿನಾಮೆಯನ್ನು ಇನ್ನೂ ಅಂಗೀಕಾರವಾಗಿಲ್ಲ ಎಂದು ತಿಳಿಸಿದ್ದಾರೆ.

ರಾಜಿನಾಮೆ ಸಲ್ಲಿಕೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ ಪ್ರಸಾದ್ ಅವರು, ತಾವು ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ ಕಾಂಗ್ರೆಸ್ ಪಕ್ಷಕ್ಕೂ ರಾಜಿನಾಮೆ ಸಲ್ಲಿಸಿದ್ದೇನೆ.  ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ರಾಜಕೀಯದಲ್ಲಿ ನಾನು ಗೌರವಯುತ ನಿವೃತ್ತಿ ಬಯಸುತ್ತೇನೆ, ಹೀಗಾಗಿ ನನ್ನ ಮುಂದಿನ ನಡೆಯನ್ನು ತೀರಾ ಎಚ್ಚರಿಕೆ ಇಡುತ್ತೇನೆ.  ನನ್ನ ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಚರ್ಚಿಸಿ ನನ್ನ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ತೀವ್ರ ವಾಗ್ದಾಳಿ
ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ನಾನು ಸಹಾಯ ಮಾಡಿದ ವ್ಯಕ್ತಿಯೇ ನನಗೆ ದ್ರೋಹ ಬಗೆದರು. ನಾನು ಮತ್ತು ಸಿದ್ದರಾಮಯ್ಯನವರು ತುಂಬಾ  ಒಳ್ಳೆಯ ಸಂಬಂಧ ಹೊಂದಿದ್ದೆವು. ಸಿದ್ದರಾಮ್ಯಯ ಅವರು ನಮ್ಮ ಪಕ್ಕದ ಜಿಲ್ಲೆಯವರಾಗಿದ್ದು, ನನಗೆ ವೈಯಕ್ತಿಕವಾಗಿ ಆಪ್ತರಾಗಿದ್ದರು. ಆದರೆ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ  ಒಮ್ಮೆಯೂ ತಮ್ಮೊಂದಿಗೆ ಚರ್ಚೆ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ತಾವು ಸಚಿವರಾಗಿದ್ದಾಗ ಸಾಕಷ್ಟು ಉತ್ತಮ ಕಾರ್ಯಗಳನ್ನು ಮಾಡಿದ್ದೆವು. ನಾವು ಮಾಡಿದ ಕಾರ್ಯಗಳಿಂದಾಗಿ ಸರ್ಕಾರಕ್ಕೆ ಸಾಕಷ್ಚು ಒಳ್ಳೆಯ ಹೆಸರು ಕೂಡ ಬಂದಿತ್ತು. ಹೀಗಿದ್ದೂ ನನ್ನನ್ನು  ಸಂಪುಟದಿಂದ ಕೈಬಿಟ್ಟ ರೀತಿ ನಿಜಕ್ಕೂ ನನಗೆ ತೀರಾ ನೋವು ತಂದಿತ್ತು. ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಆದರೆ ಸಂಪುಟದಿಂದ ಕೈಬಿಡುವ ಕುರಿತು ನನಗೆ  ಮಾಹಿತಿಯನ್ನಾದರೂ ನೀಡಬಹುದಿತ್ತು ಅಥವಾ ನನ್ನ ಖಾತೆಯಲ್ಲಾಗಿರುವ ಲೋಪದೋಷಗಳನ್ನು ತಿಳಿಸಿಕೊಡಬಹುದಿತ್ತು ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com