

ಮೈಸೂರು: ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ಜೆಡಿಎಸ್ ಪಕ್ಷಕ್ಕೆ ಬರಲು ಇಚ್ಛಿಸಿದರೆ ಸ್ವಾಗತಿಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶ್ರೀನಿವಾಸ್ ಪ್ರಸಾದ್ ಅವರನ್ನು ನಾನು ಭೇಟಿಯಾಗಿಲ್ಲ ಆದರೆ, ಪಕ್ಷದ ಕೆಲ ನಾಯಕರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರಿಗೆ ದೇಶದ ಆಗುಹೋಗುಗಳು ಚೆನ್ನಾಗಿ ತಿಳಿಸಿದೆ. ಜನರ ಹಿತದೃಷ್ಟಿಯಿಂದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಶ್ರೀನಿವಾಸ್ ಪ್ರಸಾದ್ ಅವರಂತಹ ಪ್ರಾಣಿಕರು ಬೇಕಾಗಿಲ್ಲ. ಭ್ರಷ್ಟ ನಾಯಕರಿಗೆ ಮಾತ್ರ ಪಕ್ಷದಲ್ಲಿ ಉಳಿದುಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ನಡೆಸಿಕೊಂಡ ರೀತಿಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ.
ನಂಜನಗೂಡು ಕ್ಷೇತ್ರ ಪ್ರತಿನಿಧಿಸುತ್ತಿರುವ ವಿ. ಶ್ರೀನಿವಾಸ ಪ್ರಸಾದ್ ಅವರು ಅ.17 ರಂದು ಮಧ್ಯಾಹ್ನ 12 ಕ್ಕೆ ವಿಧಾನಸಭಾ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.