ಸಿದ್ದರಾಮಯ್ಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಬಿ.ಎಸ್. ಯಡಿಯೂರಪ್ಪ

ಸಾಕಷ್ಟು ವಿರೋಧಗಳ ನಡುವೆಯೂ ಉಕ್ಕಿನ ಸೇತುವೆ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ..
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು: ಸಾಕಷ್ಟು ವಿರೋಧಗಳ ನಡುವೆಯೂ ಉಕ್ಕಿನ ಸೇತುವೆ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಸೋಮವಾರ ಕಿಡಿಕಾರಿದ್ದಾರೆ.

ಉಕ್ಕಿನ ಸೇತುವೆ ವಿಚಾರ ಅತ್ಯಂತ ಸೂಕ್ಷ್ಮ ವಿಚಾರ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆಂದು ಹೇಳಿದ್ದಾರೆ.

ಸೇತುವೆ ನಿರ್ಮಾಣ ಯೋಜನೆ ಕುರಿತಂತೆ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಗಮನಿಸಿದರೆ, ಅವರಲ್ಲಿರುವ ಸೊಕ್ಕನ್ನು ತೋರಿಸುತ್ತದೆ. ಸಿದ್ದರಾಮಯ್ಯ ಅವರ ಈ ನಡೆ ದುರಹಂಕಾರದ ಪರಮಾವಧಿ. ಸಂವೇದನಾರಹಿತವಾಗಿ ಸಿದ್ದರಾಮಯ್ಯ ಅವರು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಉದ್ದೇಶಿತ ಉಕ್ಕಿನ ಸೇತುವೆ ಯೋಜನೆಯಿಂದ ನಗರದ ಸಂಚಾರ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಮಾತ್ರ ಸಿಗುತ್ತದೆ. ಯೋಜನೆಗೆ ರು.1800 ಕೋಟಿ ಖರ್ಚು ಮಾಡುವುದು ದುಂದುವೆಚ್ಚವಷ್ಟೇ. ಮೂಲಕ ಸೌಕರ್ಯ ಕಲ್ಪಿಸುವ ಯೋಜನೆ ಜನಸ್ನೇಹಿ. ಪರಿಸರ ಸ್ನೇಹಿ ಹಾಗೂ ಮಿತವ್ಯಯದಿಂದ ಕೂಡಿರಬೇಕು.

ಬಿಜೆಪಿ ಆಡಳಿತಾವಧಿಯಲ್ಲಿಯೇ ಉಕ್ಕಿನ ಸೇತುವೆ ಯೋಜನೆಯನ್ನು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು ಸಾಧ್ಯವಿಲ್ಲ ಎನ್ನುವ ಕಾರಣಕ್ಕೇ ಆರಂಭದಲ್ಲೇ ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com