ಸಿದ್ದರಾಮಯ್ಯ ಮೊದಲಿನಂತಿಲ್ಲ: ಸಿಎಂ ವಿರುದ್ಧ ಸಿ.ಎಂ. ಇಬ್ರಾಹಿಂ ವಾಗ್ದಾಳಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗ ಮೊದಲಿನಂತಿಲ್ಲ. ವ್ಯವಸ್ಥೆಯೊಂದಿಗೆ ಅವರೂ ಬದಲಾಗಿದ್ದಾರೆ ಎಂದು ರಾಜ್ಯ ಯೋಜನಾ ಆಯೋಗದ...
ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗ ಮೊದಲಿನಂತಿಲ್ಲ. ವ್ಯವಸ್ಥೆಯೊಂದಿಗೆ ಅವರೂ ಬದಲಾಗಿದ್ದಾರೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಶುಕ್ರವಾರ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಜನಸಾಮಾನ್ಯರಿಗೆ ಭದ್ರತೆ ಇಲ್ಲವಾಗಿದೆ. ಸಿದ್ಧರಾಮಯ್ಯನವರು ತೃಪ್ತಿದಾಯಕ ಆಡಳಿತ ನಡೆಸಿಲ್ಲ ಎಂದು ದೂರಿದ್ದಾರೆ.
ವ್ಯವಸ್ಥೆ ಹಾಳಾಗಿದೆ. ವ್ಯವಸ್ಥೆಯೊಂದಿಗೆ ಮುಖ್ಯಮಂತ್ರಿಯೂ ಬದಲಾಗಿದ್ದಾರೆ. ಅಧಿಕಾರಿಗಳು ಬದಲಾವಣೆಯಾಗಿದ್ದಾರೆ ಎಂದು ಟೀಕಿಸಿದ್ದಾರೆ. ನಾನು ಸಿದ್ಧರಾಮಯ್ಯನವರೊಂದಿಗೆ ಈಗಲೂ ಪ್ರೀತಿ ವಿಶ್ವಾಸದಿಂದ ಇದ್ದೇನೆ. ಅವರಿಗೆ ಸಲಹೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಅವರಿಗೆ ಅವರೇ ಸಾಟಿ ಎಂದಿರುವ ಇಬ್ರಾಹಿಂ, ಸಮಾನ ಮನಸ್ಕರು ಒಂದಾಗುವ ಕಾಲ ಸನ್ನಿಹಿತವಾಗಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ಧರಾಮಯ್ಯನವರ ಆಪ್ತರಾಗಿರುವ ಇಬ್ರಾಹಿಂ ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com