ಸಿದ್ದರಾಮಯ್ಯ ರಾಜಿನಾಮೆ ನೀಡಲಿ, ಇಲ್ಲವೆ ಸಿಎಂ ಇಬ್ರಾಹಿಂ ವಜಾಗೊಳಿಸಿ: ಪೂಜಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಲೂ ಗೌರವವಿದ್ದರೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಅಥವಾ ತಮ್ಮ ವಿರುದ್ಧ...
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಲೂ ಗೌರವವಿದ್ದರೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಅಥವಾ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ವಜಾಗೊಳಿಸಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರು ಶನಿವಾರ ಆಗ್ರಹಿಸಿದ್ದಾರೆ.
ಸಿಎಂ ಇಬ್ರಾಹಿಂ ಹೇಳಿಕೆ ಬಗ್ಗೆ ಇಂದು ಮಂಗಳೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸದ ಪೂಜಾರಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನೇತೃತ್ವದಲ್ಲಿ ಒಳ ಸಂಚು ನಡೆದಿದ್ದು, ಅವರ ಪರವಾಗಿ ಮಾತನಾಡಿದ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಮತ್ತು ತಕ್ಷಣವೇ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದರು,
ಕಾಂಗ್ರೆಸ್ ಪಕ್ಷಕ್ಕೆ ಇಬ್ರಾಹಿಂ ಕೊಡುಗೆ ಏನು ಎಂದು ಪ್ರಶ್ನಿಸಿರುವ ಅವರು, ಈ ರೀತಿ ಪಕ್ಷದ ವಿರುದ್ಧವಾಗಿ ಮಾತನಾಡಿರುವವರನ್ನು ಯಾವ ಕಾರಣಕ್ಕೂ ಉಳಿಸಿಕೊಳ್ಳಬಾರದು. ಕೂಡಲೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಜನಾರ್ದನ ಪುಜಾರಿ ಅವರು ಒತ್ತಾಯಿಸಿದ್ದಾರೆ.
ಸಿದ್ಧರಾಮಯ್ಯ ಈಗ ಮೊದಲಿನಂತಿಲ್ಲ. ವ್ಯವಸ್ಥೆಯೊಂದಿಗೆ ಅವರೂ ಬದಲಾಗಿದ್ದಾರೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಜನಸಾಮಾನ್ಯರಿಗೆ ಭದ್ರತೆ ಇಲ್ಲವಾಗಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಅವರಿಗೆ ಅವರೇ ಸಾಟಿ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com