ಕಿಕ್ ಬ್ಯಾಕ್ ಪ್ರಕರಣದಲ್ಲಿ ಖುಲಾಸೆಗೊಂಡ ನಂತರ ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿತ್ತು. ಕಿಕ್ ಬ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರಲ್ಲಿ ಆತಂಕವಿತ್ತು. ಈಗ ಆ ಆತಂಕ ದೂರವಾಗಿದ್ದು, ಕಾರ್ಯಕರ್ತರಿಗೆ ಸಂತಸವಾಗಿದೆ ಎಂದರು.