ದೀಪಾವಳಿ ನಂತರ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆ ಸಾಧ್ಯತೆ
ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಯಾವ ಪಕ್ಷ ಸೇರುತ್ತಾರೆ ಎಂಬುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಮೂಲಗಳ ಪ್ರಕಾರ ಹಿರಿಯ ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ. ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶೀನಿವಾಸ ಪ್ರಸಾದ್ ಅವರಿಗೆ ಕರೆ ಮಾಡಿ ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯ ಹಲವು ಮುಖಂಡರು ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ,ಡಿ ಕುಮಾರ ಸ್ವಾಮಿ ಕೂಡ ಶ್ರೀನಿವಾಸ್ ಪ್ರಸಾದ್ ಅವರ ಸಂಪರ್ಕದಲ್ಲಿದ್ದು, ಉಪ ಚುನಾವಣೆಯಲ್ಲಿ ಪ್ರಸಾದ್ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಇತ್ತೀಚೆಗೆ ನಂಜನಗೂಡಿನಲ್ಲಿ ನಡೆಸಿದ ಸಮಾವೇಶಕ್ಕೆ ಪರ್ಯಾಯವಾಗಿ ಶ್ರೀನಿವಾಸ್ ಪ್ರಸಾದ್ ಕೂಡ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. ನಾಲ್ಕು ದಶಕಗಳ ಕಾಲ ತಮ್ಮನ್ನು ಆರಿಸಿ ಕಳುಹಿಸಿದ ಜನತೆಗೆ ಕೃತಜ್ಞತೆ ಅರ್ಪಿಸಲು ನಿರ್ಧರಿಸಿದ್ದಾರೆ. ಜೊತೆಗೆ ಬಿಜೆಪಿ ಉನ್ನತ ನಾಯಕರುಗಳ ಜೊತೆ ಚರ್ಚಿಸಿ ಸೇರ್ಪಡೆಯಾಗುವ ದಿನಾಂಕ ಕೂಡ ನಿರ್ಧರಿಸಲಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಸೇರ್ಪಡೆಗೊಂಡರೂ ತಮ್ಮ ತತ್ವ ಸಿದ್ಧಾಂತಗಳ ಜೊತೆ ಯಾವುದೇ ರಾಜೀ ಇಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ