ಬಿಬಿಎಂಪಿಯಲ್ಲಿ ಮೇಯರ್ ಸ್ಥಾನ ನೀಡುವ ಪಕ್ಷದ ಜ‌ತೆ ಜೆಡಿಎಸ್‌ ಮೈತ್ರಿ: ಕುಮಾರಸ್ವಾಮಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಡಿಎಸ್ ಈಗ ಮತ್ತೆ ಕಿಂಗ್ ಆಗಲು ಹೊರಟಿದ್ದು....
Updated on
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಡಿಎಸ್ ಈಗ ಮತ್ತೆ ಕಿಂಗ್ ಆಗಲು ಹೊರಟಿದ್ದು, ಬಿಬಿಎಂಪಿಯಲ್ಲಿ ಮೇಯರ್ ಸ್ಥಾನ ನೀಡುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ನಾವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದ್ದೆವು. ಈ ಬಾರಿ ಮೇಯರ್ ಪಟ್ಟ ನೀಡುವವರಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಹೇಳಿದ್ದು, ಜೆಡಿಎಸ್ ಬೆಂಬಲ ಯಾರಿಗೆ ಎಂಬ ಪ್ರಶ್ನೆ ಹುಟ್ಟುಹಾಕಿದೆ.
ಕಳೆದ ಬಾರಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ. ಈ ಬಾರಿ ಮೇಯರ್ ಸ್ಥಾನ ನಮಗೆ ಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸೆ.19ರಂದು ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು, ಕಿಂಗ್ ಮೇಕರ್ ಜೆಡಿಎಸ್ ಯಾರನ್ನು ಬೆಂಬಲಿಸಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com