ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಂಡೂರಾವ್, ನಮಗೆ ಸುಪ್ರೀಂಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ. ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶಕ್ಕೆ ಅವಕಾಶವಿದೆ. ಆದರೆ ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಬಿಜೆಪಿ ಯಾಕೆ ಅಡ್ಡಿಪಡಿಸುತ್ತಿದೆ ಅಂತ ಗೊತ್ತಾಗುತ್ತಿಲ್ಲ ಎಂದರು.