ಕಾವೇರಿ ಕಿಚ್ಚು: ಸಂಸದ ಸ್ಥಾನಕ್ಕೆ ಸಿ.ಎಸ್.ಪುಟ್ಟರಾಜು ರಾಜಿನಾಮೆ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದನ್ನು ಖಂಡಿಸಿ ಮಂಡ್ಯ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರು ಸಂಸದ...
ಸಿಎಸ್ ಪುಟ್ಟರಾಜು
ಸಿಎಸ್ ಪುಟ್ಟರಾಜು
Updated on

ಮಂಡ್ಯ: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದನ್ನು ಖಂಡಿಸಿ ಮಂಡ್ಯ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪುಟ್ಟರಾಜು, ಸುಪ್ರೀಂ ಕೋರ್ಟ್ ರಾಜ್ಯದ ರೈತರ ಗಾಯದ ಮೇಲೆ ಬರೆ ಎಳೆದಿದೆ. ಇಂತಹ ಸಂದರ್ಭದಲ್ಲಿ ನಾನು ಸಂಸದನಾಗಿ ಮುಂದುವರೆಯುವುದಿಲ್ಲ ಎಂದರು.

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕಿತ್ತು. ಆದರೆ ಕಾವೇರಿ ಹಾಗೂ ಮಹಾದಾಯಿ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಇದನ್ನು ಖಂಡಿಸಿ ನಾನು ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರ ಮೂಲಕ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ನಂತರ ದೆಹಲಿಗೆ ತೆರಳಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಸುಪ್ರೀಂ ಕೋರ್ಟ್ ಆದೇಶವನ್ನು ಹಲವು ಜನಪ್ರತಿನಿಧಿಗಳು ಖಂಡಿಸಿದ್ದು, ಮಂಡ್ಯ ಜಿಲ್ಲೆ ಮದ್ದೂರು ಶಾಸಕ ಡಿಸಿ ತಮ್ಮ ಹಾಗೂ ಜೆಡಿಎಸ ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ನಾಡಗೌಡ ಅವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com