ತುರ್ತು ಅಧಿವೇಶನ: ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಆದೇಶ ಪಾಲಿಸಲು ಸಾಧ್ಯವಾಗದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಶುಕ್ರವಾರ ವಿಧಾನ ಮಂಡಲದ ತುರ್ತು ಅಧಿವೇಶನ ಕರೆದಿದ್ದು, ಈ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಗುರುವಾರ ವಿಪ್ ಜಾರಿ ಮಾಡಲಾಗಿದೆ.
ನಾಳೆ ಕಡ್ಡಾಯವಾಗಿ ಅಧಿವೇಶನದಲ್ಲಿ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್ ಅವರು ಇಂದು ವಿಪ್ ಜಾರಿ ಮಾಡಿದ್ದಾರೆ.
ಇನ್ನು ವಿಧಾನ ಪರಿಷತ್ ಸದಸ್ಯರಿಗೂ ಸದನಕ್ಕೆ ಹಾಜರಾಗುವಂತೆ ಪರಿಷತ್ ಸಚೇತಕ ಐವನ್ ಡಿಸೋಜಾ ಅವರು ವಿಪ್ ಜಾರಿಗೊಳಿಸಿದ್ದಾರೆ.
ಈಗಾಗಲೇ ತಮಿಳುನಾಡಿಗೆ ನೀರು ಬಿಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನೀರು ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಾಧ್ಯವಿಲ್ಲ ಎಂಬ ಸರ್ವಾನುಮತದ ನಿರ್ಣಯವನ್ನು ಅಧಿವೇಶನದಲ್ಲಿ ಕೈಗೊಂಡರೆ ಸುಪ್ರೀಂ ಕೋರ್ಟ್ ಅದನ್ನು ಪ್ರಶ್ನಿಸಲು ಸಾಧ್ಯವಾಗುವುದಿಲ್ಲ. ಈ ಅವಕಾಶವನ್ನು ಬಳಸಿಕೊಳ್ಳಲು ಸರ್ಕಾರ ವಿಶೇಷ ಅಧಿವೇಶನ ಕರೆದಿದೆ.
ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ತಲುಪಿದ್ದು, ಇಂತಹ ಸ್ಥಿತಿಯಲ್ಲೂ  ಕರ್ನಾಟಕ ತಮಿಳುನಾಡಿಗೆ ಸೆ.27 ವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರಿನಂತೆ ಒಟ್ಟು 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com