

ಬೆಂಗಳೂರು: ಪ್ರಧಾನಿಗೆ ಜವಬ್ದಾರಿ ಇಲ್ಲ ಅಂತ ನಾವು ಕೈಕಟ್ಟಿ ಕೂರೋಕೆ ಆಗುತ್ತಾ . ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳ ಸಮಸ್ಯೆಗಳನ್ನು ಪ್ರಧಾನಿ ಬಗೆಹರಿಸಬೇಕು ಎಂದು ಸಂಸದ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ಣಯ ರಾಜ್ಯಕ್ಕೆ ದೊಡ್ಡ ಪೆಟ್ಟು ನೀಡಿದೆ. ಈ ಆದೇಶದಿಂದ ರೈತರಿಗೆ ಸಂಕಷ್ಟ ಎದುರಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ. ಹೀಗಾಗಿ ನಾವೆಲ್ಲ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ರಾಜ್ಯದ ಜನರ ಪರವಾಗಿ ನಾವೆಲ್ಲ ಹೋರಾಟ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಖರ್ಗೆ ಹೇಳಿದ್ದಾರೆ.
ಐಟಿ ಬಿಟಿ ಕಂಪನಿಗಳು ಬೆಂಗಳೂರಿನಲ್ಲಿವೆ. ಬೆಂಗಳೂರು ಅಭಿವೃದ್ಧಿ ಹೊಂದುತ್ತೆ ಅನ್ನೋ ಕುತಂತ್ರವೂ ಇರಬಹುದು. ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಸುಪ್ರೀಂ ಕೋರ್ಟ್ ಯಾವ ಮಾನದಂಡ ಅನುಸರಿಸಿದೆ ಅನ್ನೋದೇ ಗೊತ್ತಾಗ್ತಿಲ್ಲ. ಈ ತೀರ್ಪು ನಿಜಕ್ಕೂ ಅನ್ಯಾಯ. ಇದು ರಾಜ್ಯದ ಜನರ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.