ಗುಂಡ್ಲುಪೇಟೆ ಉಪಚುನಾವಣೆ: ಹಣ ಸಾಗಿಸುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಕಾರು ಜಪ್ತಿ

ಏಪ್ರಿಲ್ 9ರಂದು ನಡೆಯಲಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬಿದ್ದಿದ್ದು...
ಎಂಪಿ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Updated on
ಚಾಮರಾಜನಗರ: ಏಪ್ರಿಲ್ 9ರಂದು ನಡೆಯಲಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಕೊನೆ ಗಳಿಗೆಯಲ್ಲಿ ಮತದಾರರನ್ನು ಸೆಳೆಯಲು ಹಣ ಸಾಗಿಸುತ್ತಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಕಾರನ್ನು ಶುಕ್ರವಾರ ಸಂಜೆ ಜಪ್ತಿ ಮಾಡಲಾಗಿದೆ.
ಇಂದು ಸಂಜೆ ರೇಣಕಾಚಾರ್ಯ ಅವರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ಗುಂಡ್ಲುಪೇಟೆಯಿಂದ ನಂಜನಗೂಡಿನತ್ತ ತೆರಳುತ್ತಿದ್ದ ವೇಳೆ ಪೊಲೀಸರು ಬೇಗೂರು ಚೆಕ್ ಪೊಸ್ಟ್ ಬಳಿ ಕಾರು ತಪಾಸಣೆ ನಡೆಸಿದ್ದು, ಈ ವೇಳೆ ಮಾಜಿ ಸಚಿವನ ಕಾರಿನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಾಜಿ ಸಚಿವನಿಗೆ ಸೇರಿದ ಕೆಎ 02, ಎಂಟಿ 22 ವಾಹನವನ್ನು ಜಪ್ತಿ ಮಾಡಲಾಗಿದ್ದು, ರೇಣುಕಾಚಾರ್ಯ ಅವರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆದರೆ ಸ್ಕಾರ್ಪಿಯೋದಲ್ಲಿದ್ದ ಇತರೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com