ಪಕ್ಷಾಂತರ ಪರ್ವ: ಮಾಜಿ ಸಚಿವ ಶಿವರಾಮೇಗೌಡ ಮತ್ತು ಸುರೇಶ್ ಗೌಡ ಜೆಡಿಎಸ್ ಸೇರ್ಪಡೆ?

ಮಾಜಿ ಸಚಿವ ಶಿವರಾಮೇಗೌಡ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ತಯಾರಿ ನಡೆಸುತ್ತಿದ್ದಾರೆ ...
ಶಿವರಾಮೇಗೌಡ
ಶಿವರಾಮೇಗೌಡ
ಬೆಂಗಳೂರು: ಮಾಜಿ ಸಚಿವ ಶಿವರಾಮೇಗೌಡ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಸೇರ್ಪಡೆ ಸಂಬಂಧ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಮಾಜಿ ಶಾಸಕ ಸುರೇಶ್ ಗೌಡ ಮತ್ತು ಮಾಜಿ ಸಚಿವ ಶಿವರಾಮೇಗೌಡ ಭೇಟಿ ನೀಡಿದರು. ಇವರಿಗೆ ಮಂಡ್ಯ ಸಂಸದ ಪುಟ್ಟರಾಜು, ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಾಥ್ ನೀಡಿದರು. ಈ ವೇಳೆ ಉಭಯ ನಾಯಕರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಜೆಡಿಎಸ್ ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ನಾಗಮಂಗಲ ಕ್ಷೇತ್ರದಲ್ಲಿ ಶಾಸಕ ಚಲುವರಾಯ ಸ್ವಾಮಿಗೆ ಪರ್ಯಾಯ ನಾಯಕರನ್ನು ಸೃಷ್ಠಿಸುವುದಾಗಿ ದೇವೇಗೌಡ ಹಾಗೂ ಕುಮಾರಸ್ವಾಮಿ ಈಗಾಗಲೇ ಹೇಳಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ಟಿಕೆಟ್ ಅಪೇಕ್ಷೆಯೊಂದಿಗೆ ಕಾಂಗ್ರೆಸ್‌ನ ಈ ನಾಯಕರು ಜೆಡಿಎಸ್ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 10ರ ನಂತರ ಮಾಜಿ ಶಾಸಕ ಸುರೇಶಗೌಡ ಮತ್ತು ಮಾಜಿ ಸಚಿವ ಶೀವರಾಮೇಗೌಡ ಜೆಡಿಎಸ್‌‌ಗೆ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ದೇವೇಗೌಡರ ಜೊತೆ ಮಾತುಕತೆ ಮಾಡಲಾಗಿದೆ. ದೇವೇಗೌಡರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇಬ್ಬರು ನಾಯಕರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಲು ಸಮ್ಮತಿಸಿದ್ದಾರೆ. ಇಂದಿನ ಭೇಟಿ ವೇಳೆ ಟಿಕೆಟ್ ಕುರಿತು ಯಾವುದೇ ಚರ್ಚೆ ನಡೆಯಲಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಗಮಂಗಲದ ಮಾಜಿ ಶಾಸಕ ಸುರೇಶಗೌಡ ಮತ್ತು ಮಾಜಿ ಸಚಿವ ಶಿವರಾಮೇಗೌಡ ನನ್ನನ್ನು ಭೇಟಿ ಮಾಡಿದ್ದಾರೆ. ಜೆಡಿಎಸ್‌ಗೆ ಸೇರ್ಪಡೆಗೊಳ್ಳುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com