ಚೆನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಸ್ಪರ್ಧೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಗೆ ಬಿಟ್ಟದ್ದು: ದೇವೇಗೌಡ
2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ...
ಬೆಂಗಳೂರು: 2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ಕುಟುಂಬದಿಂದ ಕೇವಲ ಇಬ್ಬರೂ ಮಾತ್ರ ಕಣಕ್ಕಿಳಿಯಲಿದ್ದಾರೆಂದು ಈ ಹಿಂದೆ ದೇವೇಗೌಡ ಅವರು ಹೇಳಿಕೆ ನೀಡಿದ್ದರು. ಇದರ ನಡುವೆಯೇ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಫರ್ಧಿಸುವ ಕುರಿತಂತೆ ಮಾತುಗಳು ಕೇಳಿಬಂದಿದ್ದವು.
ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಕುರಿತಂತೆ ಈ ವರೆಗೂ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಈ ಬಗ್ಗೆ ಸ್ವತಃ ಹೆಚ್.ಡಿ.ಕುಮಾರಸ್ವಾಮಿಯವರೇ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು 2018ರ ಚುನಾವಣೆ ವೇಳೆ ರಾಜಕೀಯ ಪ್ರವೇಶ ಮಾಡಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸುವ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ರೇವಣ್ಣ ಅವರ ಮಗ ಪ್ರಜ್ವಲ್ ಅವರು ಹಾಸನದಲ್ಲಿ ಕೆಲ ಪಕ್ಷಗಳೊಂದಿಗೆ ಕೈಜೋಡಿಸಿ ಕಳೆದ 6 ವರ್ಷಗಳಿಂದಲೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಮುಂದಿನ 2018ರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.