ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು: ಎಚ್.ಡಿ.ಕುಮಾರಸ್ವಾಮಿ

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಳಿದಿದ್ದರೇ ಫಲಿತಾಂಶ ಬೇರೆಯೇ ಇರುತ್ತಿತ್ತು ಎಂದು ಮಾಜಿ ಸಿಎಂ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಳಿದಿದ್ದರೇ ಫಲಿತಾಂಶ ಬೇರೆಯೇ ಇರುತ್ತಿತ್ತು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಎರಡು ಕ್ಷೇತ್ರಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು ಉಪಚುನಾವಣೆ ಫಲಿತಾಂಶದಿಂದ ಯಾರು ಹಿಗ್ಗಿ ಮೇಲೇರಬೇಕಿಲ್ಲ. ಕುಗ್ಗಿ ಕೆಳಗಿಳಿಯಬೇಕಿಲ್ಲ. ನಾವು ನಂಜನಗೂಡಿನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ. 
ನಮ್ಮಿಂದ ಕಾಂಗ್ರೆಸ್ ಗೆದ್ದಿಲ್ಲ. ನಾವು ಅಭ್ಯರ್ಥಿ ಹಾಕದೆ ಇರೋದು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿರಬಹುದು.ಕರ್ನಾಟಕ ಉತ್ತರ ಪ್ರದೇಶ ಅಲ್ಲ. ಬಿಜೆಪಿ ಕರ್ನಾಟಕದಲ್ಲಿ ಏಕಾಂಗಿಯಾಗಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಬಿಜೆಪಿಯ ಮಿಷನ್ 150 ಕನಸಿನ ಮಾತು. ಹಿಂದೆ ಒಂದು ಬಾರಿ ಕೊಟ್ಟ ಅವಕಾಶದಲ್ಲಿ ಅವರು ಏನೇನೆಲ್ಲಾ ಮಾಡಿದ್ದಾರೆ ಅನ್ನೋದು ಜನಕ್ಕೆ ಗೊತ್ತು. ಕಳೆದ ಸಾರಿ ಗೆದ್ದ 108 ಸ್ಥಾನವೇ ಅವರ ದೊಡ್ಡ ಸಾಧನೆ ಎಂದು ಲೇವಡಿ ಮಾಡಿದರು.
ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com