ವಿಧಾನಸಭೆ ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಇಲ್ಲ: ಎಚ್ ಡಿ ಕುಮಾರಸ್ವಾಮಿ

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಅಥವಾ ಒಳ....
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
ಮಂಗಳೂರು: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಅಥವಾ ಒಳ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಡಿಕೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ಅಲ್ಲದೆ ಅತಂತ್ರ ಫಲಿತಾಂಶ ಬಂದರೂ ಚುನಾವಣೋತ್ತರ ಮೈತ್ರಿಯನ್ನೂ ಮಾಡಿಕೊಳ್ಳುವುದಿಲ್ಲ. ಇದು ನನ್ನ ಸಾರ್ವಜನಿಕ ಘೋಷಣೆ. ಬೇಕಾದರೆ ಮತ್ತೆ ಚುನಾವಣೆಗೆ ಹೋಗುತ್ತೇನೆ. ಆದರೆ ಇದರಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದರು.
ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿ ಮತ್ತು ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಈ ಬಾರಿ ಜನರು ನಮಗೆ ಸಂಪೂರ್ಣ ಬಹುಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೇಳಿದರು.
ಪಕ್ಷ ಸಂಘಟಿಸುವುದಕ್ಕಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಕರಾವಳಿಯಲ್ಲೂ ಎರಡರಿಂದ ಮೂರು ಕಡೆ ಸ್ಪರ್ಧಿಸಲು ಸಿದ್ಧತೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಮೇವು ಪೂರೈಕೆಯಲ್ಲಿ ಚಿತ್ರದುರ್ಗ, ಯಾದಗಿರಿ, ಗುಲ್ಬರ್ಗಾದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ದೂರು ನೀಡಿದರೂ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com