ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಅಧ್ಯಕ್ಷ ಹುದ್ದೆ ಆಕ್ಷಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಮುಂದಿಟ್ಟಿದ್ದರು, ಜಿ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಡಿ.ಕೆ ಶಿವಕುಮಾರ್, ಮತ್ತು ಎಂ. ಪಾಟೀಲ್ ಅವರುಗಳ ಹೆಸರನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ. ಸಚಿವ ಎಂ.ಬಿ ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಸಿದ್ದರಾಮಯ್ಯ ಒಲವು ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.