ಶುಕ್ರವಾರ ದೆಹಲಿಗೆ ತೆರಳಿರುವ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲು ಯತ್ನಿಸಿದ್ದಾರೆ, ಆದರೆ ಅಮಿತ್ ಶಾ ಜಮ್ಮು ಕಾಶ್ಮೀರಕ್ಕೆ ತೆರಳಿದ ಕಾರಣ ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಪಕ್ಷದ ರಾಜ್ಯ ಉಸ್ತುವಾರಿ ಮುರುಳಿಧರ್ ರಾವ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರನ್ನು ಶನಿವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ.