ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಡೆಸಿರುವ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅವರು, ಐಟಿ ದಾಳಿ ಕುರಿತಂತೆ ಈ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇರುವುದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರ. ತಮ್ಮ ರಾಜಕೀಯ ಷಡ್ಯಂತ್ರಗಳಿಗೆ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳುತ್ತಿರುವುದು ಕೇಂದ್ರ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಇಂತಹ ಬೆದರಿಕೆಗಳ ತಂತ್ರಗಳಿಗೆ ನಾವು ಬಗ್ಗುವುದೂ ಇಲ್ಲ ಎಂದು ಹೇಳಿದ್ದಾರೆ.