ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕರ್ನಾಟಕದ ಮೇಲೆ ಕಣ್ಣಿಟ್ಟಿವೆ.
2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ರಾಯಚೂರಿನಲ್ಲಿ ಆಗಸ್ಟ್ 12ರಂದು ರೈತರ ಸಮಾವೇಶ ನಡೆಯಲಿದೆ, ರೈತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್ 12ರಿಂದ ಆಗಸ್ಟ್ 14 ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಿಷನ್ 150 ಗಾಗಿ ಕರ್ನಾಟಕದಲ್ಲಿ ಸಿದ್ಧತೆ ನಡೆಸಲಿದ್ದಾರೆ.
ಇನ್ನೂ ಮಂಗಳೂರಿನಲ್ಲಿ ನಡೆದ ಕೋಮು ಸಂಘರ್ಷ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮಿತ್ ಶಾಗೆ ರಾಜ್ಯ ಬಿಜೆಪಿ ನಾಯಕರು ವರದಿ ಸಲ್ಲಿಸಲಿದ್ದಾರೆ.