ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ನಾಯಕರು ಚೀನಾ ಉತ್ಪಾದಿತ ಸರಕುಗಳನ್ನು ತ್ಯಜಿಸುವಂತೆ ಕರೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿರುವ ಶೋಭಾ ಕರಂದ್ಲಾಜೆ, ಮೊಬೈಲ್ ಫೋನ್ ನಿಂದ ಹಿಡಿದು ಕರ್ಪೂರದಂತಹ ಪೂಜೆ ಸಾಮಗ್ರಿಗಳ ವರೆಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಕರೆ ನೀಡಿದ್ದಾರೆ.