ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು; ಪಕ್ಷದ ನಾಯಕರಿಗೆ ಇರುಸುಮುರುಸು

ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ...
ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ.
ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ.
Updated on
ಬೆಂಗಳೂರು: ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಗೈರುಹಾಜರಾಗಿದ್ದು ರಾಜ್ಯದ ಬಿಜೆಪಿ ಮುಖಂಡರಿಗೆ ಇರುಸುಮುರುಸು ಉಂಟುಮಾಡಿದೆ. ಅವರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯವನ್ನು ಇದು ಎತ್ತಿ ತೋರಿಸಿದೆ.
ಕಳೆದ ಶನಿವಾರ ನಡೆದ ಬಿಜೆಪಿ ಹಿರಿಯ ಮುಖಂಡರ ಸಭೆಯಲ್ಲಿ  ಈಶ್ವರಪ್ಪ ಭಾಗವಹಿಸಿದ್ದರು. ಆದರೆ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಭಿನ್ನಮತ ಇನ್ನೂ ಶಮನವಾಗಿಲ್ಲ. ಇದಕ್ಕೆ ನಿನ್ನೆಯ ಕಾರ್ಯಕಾರಿಣಿಗೆ ಈಶ್ವರಪ್ಪ ಬಾರದೇ ಇದ್ದುದು ಸ್ಪಷ್ಟಪಡಿಸುತ್ತದೆ. ವಿಧಾನಸಭೆ ಚುನಾವಣೆ ಮುಂದಿನ ವರ್ಷವೇ ಇರುವುದರಿಂದ ಪ್ರಮುಖ ನಾಯಕರ ಜಗಳ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.  
ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಈಶ್ವರಪ್ಪ ಅವರ ಗೈರುಹಾಜರಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಇದು ಹಬ್ಬದ ಸಮಯವಾಗಿರುವುದರಿಂದ ಈಶ್ವರಪ್ಪ ಅವರು ಪೂಜಾ ವಿಧಿ ವಿಧಾನಗಳಲ್ಲಿ ಬ್ಯುಸಿಯಾಗಿರಬಹುದು. ಸಂಸದ ಜಿ.ಎಂ.ಸಿದ್ದೇಶ್ವರ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮವಿರುವುದರಿಂದ ಕೆಲವು ನಾಯಕರು ಅಲ್ಲಿಗೆ ಹೋಗಿದ್ದಾರೆ ಎಂದರು.
ಭಿನ್ನಾಭಿಪ್ರಾಯವಿಲ್ಲ: ಈ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ತಮ್ಮ ಮನೆಯಲ್ಲಿ ಪೂಜಾ ಕಾರ್ಯಕ್ರಮವಿದ್ದರಿಂದ ಬೆಂಗಳೂರಿನ ಬಿಜೆಪಿ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತಮ್ಮ ಮತ್ತು ಯಡಿಯೂರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com