ಯಡಿಯೂರಪ್ಪನೇ ಮುಂದಿನ ಸಿಎಂ: ಬೆಂಗಳೂರಲ್ಲಿ ಬಿಎಸ್ ವೈ ಬೆನ್ನು ತಟ್ಟಿದ ಅಮಿತ್ ಶಾ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು...
ಅಮಿತ್ ಶಾ - ಬಿಎಸ್ ಯಡಿಯೂರಪ್ಪ
ಅಮಿತ್ ಶಾ - ಬಿಎಸ್ ಯಡಿಯೂರಪ್ಪ
Updated on: 
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಬಿಎಸ್ ವೈ ಬೆನ್ನು ತಟ್ಟಿದ್ದಾರೆ. 
ಮೂರು ದಿನಗಳ ರಾಜ್ಯ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಕೆಂಪೇಗೌಡ ವಿಮಾನ ನಿಲ್ದಾಣ ಸಮೀಪದ ಸಾದಹಳ್ಳಿ ಗೇಟ್ ಬಳಿ ಸೇರಿದ್ದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ನಾನು ಇನ್ನೂ ಮೂರು ದಿನ ಬೆಂಗಳೂರನಲ್ಲಿ ಇರ್ತೇನೆ. ಕರ್ನಾಟಕದ ಬಹುತೇಕ ಕಾರ್ಯಕರ್ತರೊಂದಿಗೆ ಚರ್ಚಿಸ್ತೇನೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ದಕ್ಷಿಣ ಭಾರತದಲ್ಲಿ ಮತ್ತೆ ಬಿಜೆಪಿ ಗೆಲುವನ್ನ ಆರಂಭಿಸಲಿದೆ. ಬಿಜೆಪಿ ಗೆಲುವಿಗೆ ಕರ್ನಾಟಕ ಮುನ್ನುಡಿ ಬರೆಯಲಿದೆ ಎಂದರು.
2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಸೈನಿಕರಂತೆ ಹೋರಾಟ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡುವ ಮೂಲಕ ‘ಪಾಂಚಜನ್ಯ’ ಮೊಳಗಿಸಿದ್ದಾರೆ.
ಕರ್ನಾಟಕದ ಜನ ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಗೆಲುವಿನ ರಥವನ್ನು ಕರ್ನಾಟಕದಲ್ಲೂ ಯಶಸ್ವಿಗೊಳಿಸಿ ಎಂದು ಅಮಿತ್ ಶಾ ಕರೆ ನೀಡಿದರು.
ವಿಧಾನಸಭಾ ಚುನಾವಣೆಗೆ ಉಳಿದಿರುವುದು ಇನ್ನು ಕೇವಲ 10 ತಿಂಗಳಷ್ಟೇ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಮಿಷನ್-150 ಸಾಕಾರಗೊಳಿಸಲು ಅಗತ್ಯ ರಣತಂತ್ರ ರೂಪಿಸಿ ರಾಜ್ಯ ಬಿಜೆಪಿಗೆ ಹೊಸ ಶಕ್ತಿ ತುಂಬುವುದು ಬಿಜೆಪಿ ಚಾಣಾಕ್ಷ ಅಮಿತ್ ಶಾ ಭೇಟಿಯ ಪ್ರಮುಖ ಉದ್ದೇಶವಾಗಿದೆ.
ಇದಕ್ಕೂ ಮುನ್ನ ಮಾತನಾಡಿದ ಯಡಿಯೂರಪ್ಪ, ಅಮಿತ್ ಷಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ಮಾರ್ಗದರ್ಶನದ ಮೇರೆಗೆ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದ್ದೇವೆ ಎಂದು ಅತ್ಯುತ್ಸಾಹದಿಂದ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com